ADVERTISEMENT

ಸಂಗೀತ, ನೃತ್ಯ ಪರೀಕ್ಷೆ: ಪಠ್ಯಕ್ರಮ ಪರಿಷ್ಕರಣೆ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2025, 23:13 IST
Last Updated 16 ಮಾರ್ಚ್ 2025, 23:13 IST
   

ಮೈಸೂರು: ಇಲ್ಲಿನ ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್‌ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದಿಂದ 2024–25ನೇ ಸಾಲಿನಲ್ಲಿ ನಡೆಸಲಾಗುವ ವಿಶೇಷ ಸಂಗೀತ, ನೃತ್ಯ ಹಾಗೂ ತಾಳವಾದ್ಯ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಪಠ್ಯಕ್ರಮವನ್ನು ಪರಿಷ್ಕರಿಸಲಾಗಿದೆ.

ವಿದ್ಯಾರ್ಥಿಗಳು ಹಾಗೂ ಪೋಷಕರ ಕೋರಿಕೆಯ ಮೇರೆಗೆ, ವಿಶ್ವವಿದ್ಯಾಲಯದ ಅಧ್ಯಯನ ಮಂಡಳಿ (ಬಿಒಎಸ್) ಶಿಫಾರಸಿನಂತೆ ಕ್ರಮ ಕೈಗೊಳ್ಳಲಾಗಿದೆ.

ಸಂಗೀತ, ನೃತ್ಯ ಹಾಗೂ ತಾಳವಾದ್ಯ ಹಿರಿಯ ದರ್ಜೆಗೆ (ಸೀನಿಯರ್‌) ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಕಿರಿಯ ದರ್ಜೆಯಲ್ಲಿ ಉತ್ತೀರ್ಣರಾಗಿ 2 ವರ್ಷಗಳಾಗಿರಬೇಕು ಅಥವಾ ಅಭ್ಯರ್ಥಿಗೆ 17 ವರ್ಷ ತುಂಬಿರಬೇಕು ಅಥವಾ ಸಂಗೀತ/ ನೃತ್ಯ/ ತಾಳವಾದ್ಯ ವಿಷಯಗಳನ್ನು ಐಚ್ಛಿಕವಾಗಿ ವ್ಯಾಸಂಗ ಮಾಡಿ ಪದವಿಪೂರ್ವ (ಪಿಯುಸಿ) ಶಿಕ್ಷಣ ಇಲಾಖೆ ನಡೆಸುವ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಅಂಥವರು ನೇರವಾಗಿ ಹಿರಿಯ ದರ್ಜೆ ಪರೀಕ್ಷೆ ತೆಗೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ADVERTISEMENT

ಜೂನಿಯರ್‌, ಸೀನಿಯರ್‌, ವಿದ್ವತ್‌ಪೂರ್ವ ಹಾಗೂ ವಿದ್ವತ್ ಅಂತಿಮ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿರುವ ಅಭ್ಯರ್ಥಿಗಳು  ಮರು ಪರೀಕ್ಷೆಗೆ ಮಾರ್ಚ್ 17ರಿಂದ ಅರ್ಜಿ ಸಲ್ಲಿಸಬಹುದು.

ಈ ಪರೀಕ್ಷೆಗಳಿಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಮಾರ್ಚ್‌ 31ರವರೆಗೆ ವಿಸ್ತರಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.