ಮೈಸೂರು: ಇಲ್ಲಿನ ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯವು ಸಂಗೀತ ಮತ್ತು ಪ್ರದರ್ಶಕ ಕಲೆಗಳ ಹಲವು ಪ್ರಕಾರಗಳಲ್ಲಿ ಶಿಕ್ಷಣ ನೀಡುವ ಧ್ಯೇಯದೊಂದಿಗೆ ಏಳು ಸಂಸ್ಥೆಗಳೊಂದಿಗೆ ಗುರುವಾರ ಒಡಂಬಡಿಕೆ ಮಾಡಿಕೊಂಡಿತು.
ಕುಲಪತಿ ಪ್ರೊ.ನಾಗೇಶ್ ವಿ.ಬೆಟ್ಟಕೋಟೆ ಅಧ್ಯಕ್ಷತೆಯಲ್ಲಿ ಪ್ರಕ್ರಿಯೆ ಜರುಗಿತು. ಈಗಾಗಲೇ 55 ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ.
ಮಂಡ್ಯದ ಕರ್ನಾಟಕ ಸಂಘದ ಅಧ್ಯಕ್ಷ ಜಯಪ್ರಕಾಶ್ ಗೌಡ– ಮೂಡಲಪಾಯ ಯಕ್ಷಗಾನ ಕೋರ್ಸ್, ಚೂಡಾಮಣಿ ನಂದಗೋಪಾಲ್ ನೇತೃತ್ವದ ಕರ್ನಾಟಕ ಭರತಾಗಮ ಪ್ರತಿಷ್ಠಾನದಿಂದ ಭರತನಾಟ್ಯದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಸಂಶೋಧನಾ ಕೋರ್ಸ್, ಗಣೇಶ್ ಆರ್. ನೇತೃತ್ವದ ಧನ್ವಂತರಿ ಅಕಾಡೆಮಿ, ಬೆಂಗಳೂರಿನ ವರ್ಣಕಲಾನಿಕೇತನ, ಬೆಳಗಾವಿಯ ನಂದೀಶ್ವರದ ಸಿದ್ದಲಿಂಗೇಶ್ವರ ವೇದ ಸಂಸ್ಕೃತ ಪಾಠಶಾಲೆಯವರು ಕರ್ನಾಟಕ ಸಂಗೀತ, ಹಿಂದೂಸ್ಥಾನಿ ಸಂಗೀತ, ಭರತನಾಟ್ಯ, ಡಿಪ್ಲೊಮಾ ಹಾಗೂ ಸರ್ಟಿಫಿಕೆಟ್ ಕೋರ್ಸ್ ನಡೆಸುವ ಬಗ್ಗೆ ಒಪ್ಪಂದಕ್ಕೆ ಸಹಿ ಹಾಕುವ ಕಾರ್ಯಕ್ರಮ ನಡೆಯಿತು.
‘ವಿಶ್ವವಿದ್ಯಾಲಯವು ಸಂಗೀತಾದಿ ಕಲೆಗಳನ್ನು ಬೆಳೆಸುವ ನಿಟ್ಟಿನಲ್ಲಿ ಈ ಒಡಂಬಡಿಕೆ ಕೆಲಸವನ್ನು ಮಾಡುತ್ತಿದೆ’ ಎಂದರು.
ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶಗೌಡ ಮಾತನಾಡಿ, ‘ಸಂಗೀತ ವಿಶ್ವವಿದ್ಯಾಲಯವು ತನ್ನೊಟ್ಟಿಗೆ ಇತರರನ್ನು ಬೆಳೆಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.