ಗಂಗೂಬಾಯಿ ಹಾನಗಲ್ ಸಂಗೀತ ವಿವಿ
ಮೈಸೂರು: ಕರ್ನಾಟಕ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವ ವಿದ್ಯಾಲಯ, 8 ಶಿಕ್ಷಣ ಸಂಸ್ಥೆಗಳ ಜೊತೆಗೆ ವಿವಿಧ ಕೋರ್ಸ್‌ಗಳ ಆರಂಭ ಕುರಿತು ಒಡಂಬಡಿಕೆ ಮಾಡಿಕೊಂಡಿದೆ. ಇದರೊಂದಿಗೆ, 84 ಸಂಸ್ಥೆಗಳೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದಂತಾಗಿದೆ.
ಸಂಗೀತ ಮತ್ತು ಪ್ರದರ್ಶಕ ಕಲೆಗಳ ಹಲವು ಪ್ರಕಾರಗಳಲ್ಲಿ ಶಿಕ್ಷಣ ನೀಡುವ ಧ್ಯೇಯದೊಂದಿಗೆ 2025–26ನೇ ಸಾಲಿಗೆ ಕುಲಪತಿ ಪ್ರೊ.ನಾಗೇಶ್ ವಿ.ಬೆಟ್ಟಕೋಟೆ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಪ್ರಕ್ರಿಯೆ ನಡೆದಿದೆ. 2023ರಿಂದ ಈವರೆಗೆ 76 ಸಂಸ್ಥೆಗಳೊಂದಿಗೆ ಒಪ್ಪಂದವಾಗಿತ್ತು.
‘ಸಂಗೀತಾದಿ ಪ್ರದರ್ಶನ ಕಲೆಗಳನ್ನು ರಾಜ್ಯದಾದ್ಯಂತ ಬೆಳೆಸುವ ಹಾಗೂ ಶಿಕ್ಷಣ ನೀಡುವ ನಿಟ್ಟಿನಲ್ಲಿ ಒಪ್ಪಂದ ಮಾಡಿಕೊಂಡು, ಕೇಂದ್ರಗಳನ್ನು ಸ್ಥಾಪಿಸುತ್ತಿದೆ’ ಎಂದು ಕುಲಪತಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.