ADVERTISEMENT

ಜೆಎಸ್‌ಎಸ್‌ ವಿಶೇಷಚೇತನರ ಪಾಲಿಟೆಕ್ನಿಕ್‌ಗೆ ಅರ್ಜಿ ಆಹ್ವಾನ

1

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2020, 7:24 IST
Last Updated 18 ಆಗಸ್ಟ್ 2020, 7:24 IST

ಮೈಸೂರು: ‌ಎಸ್ಸೆಸ್ಸೆಲ್ಸಿ ಉತ್ತೀರ್ಣರಾದ ಅಂಗವಿಕಲ ವಿದ್ಯಾರ್ಥಿಗಳಿಂದ 2020–21ನೇ ಸಾಲಿನ ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಕ್ಕೆ ಜೆಎಸ್‌ಎಸ್‌ ವಿಶೇಷಚೇತನರ ಪಾಲಿಟೆಕ್ನಿಕ್‌ ಸಂಸ್ಥೆಯು ಅರ್ಜಿ ಆಹ್ವಾನಿಸಿದೆ.

‘ಮೂಳೆ ಮತ್ತು ಕೀಲು ಅಂಗವಿಕಲತೆ, ಶ್ರವಣದೋಷ ಮತ್ತು ಮೂಗ, ಭಾಗಶಃ ಮತ್ತು ಪೂರ್ಣ ಅಂಧತ್ವ ಇರುವ ವಿದ್ಯಾರ್ಥಿಗಳಿಗೆ ಆರು ವಿಷಯಗಳಲ್ಲಿ ಮೂರು ವರ್ಷಗಳ ಅವಧಿಯ ಡಿಪ್ಲೊಮಾ ಕೋರ್ಸ್‌ಗಳನ್ನು ಕಲಿಸಲಾಗುವುದು. ಆಸಕ್ತರು ಸೆ. 12ರೊಳಗೆ ಅರ್ಜಿ ಸಲ್ಲಿಸಬೇಕು. ವೆಬ್‌ಸೈಟ್‌ನಲ್ಲಿ ಅರ್ಜಿ ಡೌನ್‌ಲೋಡ್‌ ಮಾಡಿಕೊಂಡು ಪೋಸ್ಟ್‌ನಲ್ಲಿ ಕಳುಹಿಸಬಹುದು. ಕೋವಿಡ್‌–19 ಕಾರಣ ಈ ಬಾರಿ ಪ್ರವೇಶಾತಿ ವಿಳಂಬವಾಗಿದೆ’ ಎಂದು ಸಂಸ್ಥೆಯ ಪ್ರಾಚಾರ್ಯ ಬಿ.ಇಳಂಗೋವನ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸಂಸ್ಥೆಯಲ್ಲಿ ಆರ್ಕಿಟೆಕ್ಚರ್‌, ಕಮರ್ಷಿಯಲ್‌ ಪ್ರಾಕ್ಟೀಸ್‌, ಕಂಪ್ಯೂಟರ್‌ ಸೈನ್ಸ್‌ ಮತ್ತು ಎಂಜಿನಿಯರಿಂಗ್‌ (ಅನುದಾನಿತ ಕೋರ್ಸ್‌), ಜ್ಯೂಯಲರಿ ಡಿಸೈನ್ ಮತ್ತು ಟೆಕ್ನಾಲಜಿ, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಷನ್ ಎ‌ಂಜಿನಿಯರಿಂಗ್ ಹಾಗೂ ಕಂಪ್ಯೂಟರ್ ಅಪ್ಲಿಕೇಷನ್ ಫಾರ್ ದಿ ವಿಷ್ಯುಯಲಿ ಇಂಪೇರ್ಡ್ (ಅನುದಾನ ರಹಿತ) ಕೋರ್ಸ್‌ಗಳನ್ನು ಕಲಿಸಲಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಿಂದ ವಿದ್ಯಾರ್ಥಿವೇತನವೂ ದೊರೆಯಲಿದೆ ಎಂದು ಮಾಹಿತಿ ನೀಡಿದರು.

ADVERTISEMENT

‘ಪ್ರಸ್ತುತ 543 ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದು, ಪ್ರತಿವರ್ಷ 220 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶವಿದೆ. ಹಾಸ್ಟೆಲ್‌ ವ್ಯವಸ್ಥೆಯೂ ಇದೆ. ಉದ್ಯೋಗ ಮತ್ತು ತರಬೇತಿ ಕೇಂದ್ರದ ಮೂಲಕ ಉದ್ಯೋಗಾವಕಾಶ ಕಲ್ಪಿಸಿಕೊಡಲಾಗುವುದು’ ಎಂದು ಹೇಳಿದರು.

ಮಾಹಿತಿಗಾಗಿ http://www.jsspda.org/ವೆಬ್‌ಸೈಟ್‌ಗ ಭೇಟಿ ನೀಡಬಹುದು. ಮೊ: 9844644937 ಅಥವಾ ದೂ: 0821–2548315 ಸಂಪರ್ಕಿಸಬಹುದು ಎಂದರು.

ಸಂಸ್ಥೆಯ ಸಿ.ಪಿ.ಮಹಾದೇವಸ್ವಾಮಿ, ನಿರುಪಮಾ, ಎಸ್‌.ಉಮಾ ಹಾಗೂ ಹಾಸ್ಟೆಲ್‌ ವಾರ್ಡನ್‌ ಶಿವಕುಮಾರಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.