ನಟ ದರ್ಶನ್
ಮೈಸೂರು: ಚಲನಚಿತ್ರ ನಟ ದರ್ಶನ್ ತೂಗುದೀಪ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ಆರೋಗ್ಯ ತಪಾಸಣೆಗೆ ಒಳಗಾದರು.
ಬೆನ್ನುನೋವಿನ ಕಾರಣ ಅವರು ವೈದ್ಯರ ಭೇಟಿಗೆ ಬಂದಿದ್ದರು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಆಸ್ಪತ್ರೆ ಮುಂದೆ ದರ್ಶನ್ ಅಭಿಮಾನಿಗಳು ಬೆಳಿಗ್ಗೆಯಿಂದಲೇ ಕಾದಿದ್ದರು. ಅವರು ಬರುತ್ತಿದ್ದಂತೆಯೇ ಜೈಕಾರ ಕೂಗಿದರು. ವಾಪಸಾಗುವಾಗಲೂ ಅವರನ್ನು ನೋಡಲು ನೂಕುನುಗ್ಗಲು ಉಂಟಾಯಿತು.
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ದರ್ಶನ್, ಜಾಮೀನಿನ ಮೇಲಿದ್ದು ತಿ.ನರಸೀಪುರ ರಸ್ತೆಯ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ಕುಟುಂಬದೊಂದಿಗೆ ಕಾಲ ಕಳೆಯುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.