ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಬಾಬು ಜಗಜೀವನರಾಂ ಅವರ ಪ್ರತಿಮೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಸೋಮವಾರ ಅನಾವರಣಗೊಳಿಸಿದರು
ಮೈಸೂರು: ಇಲ್ಲಿನ ಪಡುವಾರಹಳ್ಳಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯ ಆವರಣದಲ್ಲಿ ಪ್ರತಿಷ್ಠಾಪಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಬಾಬು ಜಗಜೀವನರಾಂ ಅವರ ಪ್ರತಿಮೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಸೋಮವಾರ ಅನಾವರಣಗೊಳಿಸಿ, ಪುಷ್ಪನಮನ ಸಲ್ಲಿಸಿದರು.
ಇದೇ ವೇಳೆ, ನವೀಕರಣಗೊಂಡ ಕಚೇರಿಯನ್ನೂ ಉದ್ಘಾಟಿಸಿದರು.
ಕಚೇರಿಯ ಒಳಾವರಣದ ಗೋಡೆಯ ಮೇಲೆ, ಅಂಬೇಡ್ಕರ್ ಅವರ ಜೀವನದ ಪ್ರಮುಖ ಘಟ್ಟಗಳನ್ನು ಕಟ್ಟಿಕೊಡುವ ಚಿತ್ರಗಳನ್ನು ಹಾಕಲಾಗಿದ್ದು, ಅದನ್ನೂ ಅನಾವರಣಗೊಳಿಸಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಒಳಾವರಣದ ಕಾರಿಡಾರ್‌ನಲ್ಲಿ ‘ಪುಸ್ತಕಗಳಲ್ಲಿ ಅಂಬೇಡ್ಕರ್’ ಎಂಬ ಶೀರ್ಷಿಕೆಯಲ್ಲಿ ಎರಡು ಸ್ಟ್ಯಾಂಡ್‌ಗಳನ್ನು ಹಾಕಲಾಗಿದ್ದು, ಅವುಗಳಲ್ಲಿ ಅಂಬೇಡ್ಕರ್ ಕುರಿತ ಪುಸ್ತಕಗಳನ್ನು ಇಡಲಾಗಿದೆ. ಅವುಗಳನ್ನು ಯಾರು ಬೇಕಾದರೂ ತೆಗೆದುಕೊಂಡು ಓದಬಹುದಾಗಿದೆ. ಕಚೇರಿಗೆ ಬರುವ ಸಂದರ್ಶಕರಿಗೆ ಅಂಬೇಡ್ಕರ್ ಅವರ ವಿಚಾರಗಳನ್ನು ತಿಳಿಸಲು ಈ ಪುಸ್ತಕಗಳನ್ನು ಒದಗಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಸಚಿವರು ಕೆಲವು ಪುಸ್ತಕಗಳ ಮೇಲೆ ಕಣ್ಣಾಡಿಸಿದರು.
ಶಾಸಕ ಟಿ.ಎಸ್. ಶ್ರೀವತ್ಸ, ವಿಧಾನಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ.ಗಾಯಿತ್ರಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಬಿ.ರಂಗೇಗೌಡ, ಸಮಾಜ ಕಲ್ಯಾಣ ಇಲಾಖೆಯ ಅಂಬೇಡ್ಕರ್ ಸಂಶೋಧನಾ ಸಂಸ್ಥೆಯ ಸಲಹೆಗಾರ ಬಸವರಾಜ ದೇವನೂರು, ದಲಿತ ಮುಖಂಡ ಪುರುಷೋತ್ತಮ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.