ADVERTISEMENT

ಮೈಸೂರು: ವಿದ್ಯಾರ್ಥಿನಿಯ ಮೇಲೆ ಹಲ್ಲೆ, ಅತ್ಯಾಚಾರಕ್ಕೆ ಯತ್ನ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2021, 14:35 IST
Last Updated 3 ಸೆಪ್ಟೆಂಬರ್ 2021, 14:35 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಮೈಸೂರು: ಇಲ್ಲಿನ ಆರ್‌.ಎಸ್‌.ನಾಯ್ಡುನಗರದ ವಸತಿ ನಿಲಯವೊಂದರಲ್ಲಿಶುಕ್ರವಾರ ಮಧ್ಯಾಹ್ನ ನುಗ್ಗಿದ ವ್ಯಕ್ತಿಯೊಬ್ಬ ವಿದ್ಯಾರ್ಥಿನಿಯೊಬ್ಬರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಈ ವೇಳೆ ಎಳೆದಾಡಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಗಾಯಗೊಂಡಿರುವ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಕುರಿತು ‘ಪ್ರಜಾವಾಣಿ’ ನಗರ ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ತ ಅವರನ್ನು ಸಂಪರ್ಕಿಸಿದಾಗ, ಘಟನಾ ಸ್ಥಳಕ್ಕೆ ಪೊಲೀಸರು ತೆರಳಿದ್ದು, ಪರಿಶೀಲನೆ ನಡೆಸಿದ್ದಾರೆ. ವಿವರಗಳು ಲಭ್ಯವಾದ ನಂತರ ಪ್ರತಿಕ್ರಿಯಿಸುವುದಾಗಿ ಹೇಳಿದ್ದಾರೆ.

ಈಚೆಗೆ ಚಾಮುಂಡಿಬೆಟ್ಟದ ತಪ್ಪಲಿನ ಲಲಿತಾದ್ರಿ‍ಪುರ ಗುಡ್ಡದಲ್ಲಿ ವಿದ್ಯಾರ್ಥಿನಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಜನತಾನಗರದ ಸ್ಮಶಾನದ ಸಮೀಪ ರೌಡಿಶೀಟರ್‌ ಒಬ್ಬನನ್ನು ಮತ್ತೊಂದು ರೌಡಿಗಳ ತಂಡವು ಕೊಲೆ ಮಾಡಿ, ಹೂತು ಹಾಕಿತ್ತು. ಇದಕ್ಕೂ ಮುನ್ನ ಚಿನ್ನದಂಗಡಿಯನ್ನು ದರೋಡೆ ಮಾಡಿ, ಗ್ರಾಹಕರೊಬ್ಬರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು.

ADVERTISEMENT

ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನೂ ಬಂಧಿಸಲಾಗಿದೆ. ಆರೋಪಿಯು ಸಂತ್ರಸ್ತೆಗೆ ಪರಿಚಯ ಇದ್ದ ಎಂದು ನಗರ ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ತ 'ಪ್ರಜಾವಾಣಿ'ಗೆ ತಿಳಿಸಿದ್ದಾರೆ .

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.