ADVERTISEMENT

ಮೈಸೂರು: ಹಕ್ಕಿಜ್ವರ ದೃಢ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2020, 21:16 IST
Last Updated 16 ಮಾರ್ಚ್ 2020, 21:16 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮೈಸೂರು: ಮೈಸೂರಿನಲ್ಲಿ ಹಕ್ಕಿಜ್ವರ ದೃಢಪಟ್ಟಿದೆ. ಇಲ್ಲಿನ ಕುಂಬಾರಕೊಪ್ಪಲು ಪ್ರದೇಶದಲ್ಲಿ ಹಕ್ಕಿಗಳ ಸಾವಿಗೆ ಎಚ್‌5ಎನ್‌1 ರೋಗಾಣು ಕಾರಣ ಎಂದು ಪರೀಕ್ಷಾ ವರದಿ ತಿಳಿಸಿದೆ.

ಎರಡು ವಾರಗಳಿಂದ ನಗರದ ವಿವಿಧೆಡೆ 15ಕ್ಕೂ ಹೆಚ್ಚು ಕೊಕ್ಕರೆ ಮತ್ತು ಕೋಳಿಗಳು ಸತ್ತಿದ್ದವು. ಪಕ್ಷಿಗಳ ಅಂಗಾಂಗ ಮಾದರಿಯನ್ನು ಪರೀಕ್ಷೆಗಾಗಿ ಭೋಪಾಲ್‌ನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ವರದಿಯಲ್ಲಿ ಹಕ್ಕಿಜ್ವರ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್‌ ತಿಳಿಸಿದರು.

ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ಬನ್ನಿಕೋಡುವಿನಲ್ಲಿ ಹಕ್ಕಿ ಜ್ವರ ಪ್ರಕರಣ ದೃಢಪಟ್ಟಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.