ADVERTISEMENT

ಮೈಸೂರು: ಸಾಮಾಜಿಕ ಜಾಲತಾಣದಲ್ಲಿ CM ವಿರುದ್ಧ ಟೀಕೆ; ಕಾರಾಗೃಹ ವೀಕ್ಷಣೆಗಾರ ಅಮಾನತು

​ಪ್ರಜಾವಾಣಿ ವಾರ್ತೆ
Published 6 ಮೇ 2025, 7:32 IST
Last Updated 6 ಮೇ 2025, 7:32 IST
<div class="paragraphs"><p>ಅಮಾನತಾದ&nbsp;ಕಾರಾಗೃಹ ವೀಕ್ಷಕ </p></div>

ಅಮಾನತಾದ ಕಾರಾಗೃಹ ವೀಕ್ಷಕ

   

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹರಿಬಿಟ್ಟ ಕೇಂದ್ರ ಕಾರಾಗೃಹ ವೀಕ್ಷಣೆಗಾರ ಎಚ್.ಎನ್.ಮಧು ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಕಾರಾಗೃಹದ ಮುಖ್ಯ ಅಧೀಕ್ಷಕ ಪಿ.ಎಸ್.ರಮೇಶ್ ಆದೇಶಿಸಿದ್ದಾರೆ.

'ಬೆಳಗಾವಿಯಲ್ಲಿ ಪೊಲೀಸ್ ಅಧಿಕಾರಿ ವಿರುದ್ಧ ಕೈ ಎತ್ತಿದ ಬಗ್ಗೆ ಏ.28 ರಂದು ಎಚ್.ಎನ್.ಮಧು ಕುಮಾರ್ ವಿಡಿಯೊ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಆ ವಿಡಿಯೊ ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ತಕ್ಷಣ ಅವರನ್ನು ಅಮಾನತುಗೊಳಿಸಲಾಗಿದೆ. ಜತೆಗೆ ಇಲಾಖಾ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದೇವೆ' ಎಂದು ರಮೇಶ್ 'ಪ್ರಜಾವಾಣಿ'ಗೆ ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.