ADVERTISEMENT

ದೈಹಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2026, 3:32 IST
Last Updated 22 ಫೆಬ್ರುವರಿ 2026, 3:32 IST
<div class="paragraphs"><p>ಜೈಲು (ಪ್ರಾತಿನಿಧಿಕ ಚಿತ್ರ)</p></div>

ಜೈಲು (ಪ್ರಾತಿನಿಧಿಕ ಚಿತ್ರ)

   

ಮೈಸೂರು: ಬಾಲಕಿ ಮೇಲೆ ಲೈಂಗಿಲ ದೌರ್ಜನ್ಯ ನಡೆಸಿ ಆಕೆ ಗರ್ಭಿಣಿಯಾಗಲು ಕಾರಣನಾದ ಪ್ರಕರಣದ ಅಪರಾಧಿ ಗುರುಮೂರ್ತಿಗೆ ಇಲ್ಲಿನ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್‌ ನ್ಯಾಯಾಲಯವು 20 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.

ಅಪರಾಧಿ ಬಾಲಕಿಯನ್ನು ಪ್ರೀತಿಸಿದ್ದು, 2023ರ ಮಾರ್ಚ್‌ನಲ್ಲಿ ಆಕೆಯ ಮನೆಗೆ ತೆರಳಿ ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಪರಿಣಾಮ ಆಕೆ ಗರ್ಭಿಣಿಯಾಗಿದ್ದು, ಗಂಡು ಮಗುವಿಗೆ ಜನ್ಮ ನೀಡಿದ್ದಳು. ಈ ಸಂಬಂಧ ದೂರು ದಾಖಲಿಸಿಕೊಂಡ ಅಂದಿನ ಇಲವಾಲ ಠಾಣಾ ಇನ್‌ಸ್ಪೆಕ್ಟರ್‌ ಶಿವನಂಜ ಶೆಟ್ಟಿ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ADVERTISEMENT

ವಿಚಾರಣೆ ನಡೆಸಿದ ನ್ಯಾಯಾಧೀಶ ಆನಂದ್‌ ಪಿ. ಹೊಗಾಡೆ ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹1 ಲಕ್ಷ ದಂಡ ವಿಧಿಸಿದ್ದು, ಆ ಹಣವನ್ನು ಬಾಲಕಿಗೆ ಪಾವತಿಸಬೇಕು ಹಾಗೂ ಆಕೆ ₹ 6 ಲಕ್ಷ ಪರಿಹಾರ ಪಡೆಯಲು ಅರ್ಹಳು ಎಂದು ಆದೇಶಿಸಿದ್ದಾರೆ.

ಕೆ.ಬಿ.ಜಯಂತಿ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.