ADVERTISEMENT

ಮೈಸೂರಿನಲ್ಲಿ ಕೋವಿಡ್‌ ಲಸಿಕಾ ಅಭಿಯಾನಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 3 ಜನವರಿ 2022, 4:40 IST
Last Updated 3 ಜನವರಿ 2022, 4:40 IST
   

ಮೈಸೂರು: ಶಾಲಾ, ಕಾಲೇಜುಗಳಲ್ಲಿನ 15ರಿಂದ 18 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಹಾಕುವ ಅಭಿಯಾನಕ್ಕೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಇಲ್ಲಿನ ಮಹಾರಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಚಾಲನೆ ನೀಡಿದರು.

ಒಟ್ಟು 1.47 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಒಂದು ವಾರದಲ್ಲಿ ಈ ಗುರಿ ತಲುಪಲು 200 ತಂಡಗಳನ್ನು ರಚಿಸಲಾಗಿದೆ. ಇದಕ್ಕಾಗಿ ಸಂಚಾರ ತಂಡಗಳನ್ನು ಸಹ ನಿಯೋಜಿಸಲಾಗಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಕೋವಿಡ್ ಎರಡನೇ ಅಲೆಯಲ್ಲಿ ಆದ ಅನಾಹುತಗಳು ಈ ಬಾರಿ ಆಗುವುದಿಲ್ಲ.ಬೇರೆ ರಾಜ್ಯಗಳಷ್ಟು ಪರಿಸ್ಥಿತಿ ನಮ್ಮಲ್ಲಿ ಹದಗೆಟ್ಟಿಲ್ಲ. ಕೇಂದ್ರ ಸರ್ಕಾರ ಹೇಳಿದರೆ ಕಠಿಣ ನಿಯಮಗಳನ್ನು ಜಾರಿಗೆ ತರಲಾಗುವುದು. ಲಾಕ್ ಡೌನ್‌ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಂತಿಮ ತೀರ್ಮಾನ ಕೈಗೊಳ್ಳುವರು ಎಂದರು.

ADVERTISEMENT

ಪಾದಯಾತ್ರೆ ಕೈಬಿಡಲು ಮನವಿ ರಾಜ್ಯದಲ್ಲಿ ದಿನೇದಿನೇ ಕೋವಿಡ್ ಹೆಚ್ಚಾಗುತ್ತಿದೆ.‌ ಕಾಂಗ್ರೆಸ್ ನವರು ರಾಜ್ಯದ ಜನರ ಹಿತದೃಷ್ಟಿಯಿಂದ ಮೇಕೆದಾಟು ಯೋಜನೆಯ ಪಾದಯಾತ್ರೆ ಕೈಬಿಡಬೇಕು.ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಅವರಿಗೆ ಮಾಡುವುದಕ್ಕೆ ಕೆಲಸ ಇಲ್ಲ‌‌ದೆ ಈ ಪಾದಯಾತ್ರೆ ಮಾಡುತ್ತಿದ್ದಾರೆ. ಇವೆಲ್ಲವೂ ಚುನಾವಣಾ ಗಿಮಿಕ್ ಎಂದು ಹರಿಹಾಯ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.