ADVERTISEMENT

ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿ ಲಕ್ಷ್ಮೀಕಾಂತ್‌ ರೆಡ್ಡಿ ಅಧಿಕಾರ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 6 ಜೂನ್ 2021, 7:38 IST
Last Updated 6 ಜೂನ್ 2021, 7:38 IST
ಲಕ್ಷ್ಮೀಕಾಂತ್‌ ರೆಡ್ಡಿ ಅವರಿಗೆ ಅಧಿಕಾರ ಹಸ್ತಾಂತರಿಸಿದ ಶಿಲ್ಪಾ ನಾಗ್‌
ಲಕ್ಷ್ಮೀಕಾಂತ್‌ ರೆಡ್ಡಿ ಅವರಿಗೆ ಅಧಿಕಾರ ಹಸ್ತಾಂತರಿಸಿದ ಶಿಲ್ಪಾ ನಾಗ್‌    

ಮೈಸೂರು: ಮೈಸೂರು ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಲಕ್ಷ್ಮೀಕಾಂತ್‌ ರೆಡ್ಡಿ ಭಾನುವಾರ ಅಧಿಕಾರ ಸ್ವೀಕರಿಸಿದರು.

ಶಿಲ್ಪಾ ನಾಗ್‌ ಅವರು ಲಕ್ಷ್ಮೀಕಾಂತ್‌ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು. ರೆಡ್ಡಿ ಅವರು ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.

ಪಾಲಿಕೆ ಆಯುಕ್ತರಾಗಿದ್ದ ಶಿಲ್ಪಾ ನಾಗ್‌ ಅವರು ಕೋವಿಡ್‌ ನಿರ್ವಹಣೆ ವಿಚಾರವಾಗಿ ರೋಹಿಣಿ ಸಿಂಧೂರಿ ಜತೆ ಜಟಾಪಟಿಗೆ ಇಳಿದಿದ್ದರು. ಜಿಲ್ಲಾಧಿಕಾರಿಗಳ ವಿರುದ್ಧ ಕಿರುಕುಳದ ಆರೋಪ ಮಾಡಿದ್ದರಲ್ಲದೆ, ಪ್ರತಿಭಟನಾರ್ಥವಾಗಿ ಆಯುಕ್ತರ ಹುದ್ದೆ ಹಾಗೂ ಐಎಎಸ್‌ ಹುದ್ದೆಗೆ ರಾಜೀನಾಮೆ ನೀಡುವ ನಿರ್ಧಾರ ತೆಗೆದುಕೊಂಡಿದ್ದರು.

ಸರ್ಕಾರ ಶನಿವಾರ ರಾತ್ರಿ ಇಬ್ಬರನ್ನೂ ಎತ್ತಂಗಡಿ ಮಾಡಿತ್ತು. ಶಿಲ್ಪಾ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.