ನ್ಯಾಯಾಲಯ
ಮೈಸೂರು: ಮುಸ್ಲಿಂ ಸಮುದಾಯವನ್ನು ಅವಹೇಳನ ಮಾಡಿದ ಪೋಸ್ಟ್ ಅನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟ ಪ್ರಕರಣದ ಆರೋಪಿ ಸತೀಶ್ (46) ಅವರಿಗೆ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಸಿವಿಲ್ ನ್ಯಾಯಾಲಯವು ಸೋಮವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಶನಿವಾರ ನಡೆದ ವಿಚಾರಣೆ ವೇಳೆ, ಜಾಮೀನು ನೀಡಬಾರದು ಎಂದು ಸರ್ಕಾರಿ ಅಭಿಯೋಜಕಿ ಸವಿತಾ ಆಕ್ಷೇಪಿಸಿದ್ದರಿಂದ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಲಾಗಿತ್ತು.
ಆರೋಪಿ ಪರ ವಕೀಲ ಅ.ಮಾ.ಭಾಸ್ಕರ್ ವಾದ ಮಂಡಿಸಿ, ಜಾಮೀನು ನೀಡಬೇಕು ಎಂದು ಒತ್ತಾಯಿಸಿದರು. ವಾದ–ಪ್ರತಿವಾದ ಆಲಿಸಿದ ನ್ಯಾಯಾಧೀಶೆ ಸರೋಜ ಅವರು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದರು.
ಇದೇ ಪ್ರಕರಣದ ವಿಚಾರದಲ್ಲಿ ಉದ್ರಿಕ್ತಗೊಂಡ ಮುಸ್ಲಿಂ ಸಮುದಾಯದ ಯುವಕರ ಗುಂಪು ಉದಯಗಿರಿ ಠಾಣೆಗೆ ಕಲ್ಲು ತೂರಾಟ ನಡೆಸಿತ್ತು. ಈ ಬಗ್ಗೆ ಪೊಲೀಸರು ಒಂದು ಸಾವಿರ ಜನರ ವಿರುದ್ಧ ಪ್ರಕರಣ ದಾಖಲಿಸಿ, 16 ಮಂದಿಯನ್ನು ಬಂಧಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.