ADVERTISEMENT

ಮೈಸೂರು: ದಸರಾ ಯಶಸ್ಸಿನ ಹರಕೆ ತೀರಿಸಿದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2020, 5:50 IST
Last Updated 27 ಅಕ್ಟೋಬರ್ 2020, 5:50 IST
ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಕುಟುಂಬ ಸದಸ್ಯರೊಂದಿಗೆ ಚಾಮುಂಡೇಶ್ವರಿ ದೇವಿಯ ಪಲ್ಲಕ್ಕಿ ರಥ ಎಳೆದರು.
ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಕುಟುಂಬ ಸದಸ್ಯರೊಂದಿಗೆ ಚಾಮುಂಡೇಶ್ವರಿ ದೇವಿಯ ಪಲ್ಲಕ್ಕಿ ರಥ ಎಳೆದರು.   
""

ಮೈಸೂರು: ನಾಡಹಬ್ಬ ಮೈಸೂರು ದಸರಾ ಯಶಸ್ಸಿಗಾಗಿ ಹರಕೆ ಹೊತ್ತಿದ್ದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಕುಟುಂಬ ಸದಸ್ಯರೊಂದಿಗೆ ಹರಕೆ ತೀರಿಸಿದ್ದಾರೆ.

‌ನಾಡಿನ ಅಧಿ ದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ತಂದೆ, ತಾಯಿ, ಪತಿ ಹಾಗೂ ಮಗುವಿನೊಂದಿಗೆ ಚಾಮುಂಡಿಯ ಪಲ್ಲಕ್ಕಿ ರಥ ಎಳೆದಿದ್ದಾರೆ.

ರೋಹಿಣಿ ಸಿಂಧೂರಿ ದಸರಾ ಹೊತ್ತಿನಲ್ಲೇ ಮೈಸೂರಿಗೆ ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿದ್ದರು. ಜಂಬೂಸವಾರಿ ಮೆರವಣಿಗೆ ಮುಗಿಯುತ್ತಿದ್ದಂತೆ ಸಂಜೆ ಬೆಟ್ಟಕ್ಕೆ ತೆರಳಿದ ರೋಹಿಣಿ ಕುಟುಂಬ ಹರಕೆ ತೀರಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.