
ಪ್ರಜಾವಾಣಿ ವಾರ್ತೆ
ಮೈಸೂರು: ಮಹಿಳೆಯೊಬ್ಬರ ಹೊಟ್ಟೆಯಲ್ಲಿದ್ದ 7 ಕೆ.ಜಿ. ತೂಕದ ಗಡ್ಡೆಯನ್ನು ನಗರದ ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ ಯಶಸ್ವಿಯಾಗಿ ಹೊರ ತೆಗೆದಿದ್ದಾರೆ.
42 ವರ್ಷ ವಯಸ್ಸಿನ ಮಹಿಳೆಯು ಹಲವು ವರ್ಷಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದು, ಓಡಾಡುವುದಕ್ಕೂ ಕಷ್ಟ ಪಡುತ್ತಿದ್ದರು. ವೈದ್ಯರಲ್ಲಿ ಪರೀಕ್ಷಿಸಿದಾಗ ಗಡ್ಡೆ ಇರುವುದು ಪತ್ತೆಯಾಯಿತು. ಬಳಿಕ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರ ತಂಡವು 7 ಕೆ.ಜಿ. ತೂಕದಷ್ಟು ಗಡ್ಡೆಯನ್ನು ಹೊರ ತೆಗೆಯಿತು. ಸದ್ಯ ಮಹಿಳೆ ಆರೋಗ್ಯದಿಂದ ಇದ್ದಾರೆ ಎಂದು ಆಸ್ಪತ್ರೆಯ ಪ್ರಕಟಣೆಯು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.