ಮೈಸೂರು: ‘ಜೀವನದಲ್ಲಿ ಎಷ್ಟೇ ಕಷ್ಟ, ಸಮಸ್ಯೆಗಳು ಎದುರಾದರೂ ಅವೆಲ್ಲವನ್ನು ಧೈರ್ಯವಾಗಿ ಎದುರಿಸಲು ಶಿಕ್ಷಣವು ನಮಗೆ ಜೊತೆಯಾಗಿ ನಿಲ್ಲುತ್ತದೆ’ ಎಂದು ಇಲ್ಲಿನ ನಟರಾಜ ಪ್ರತಿಷ್ಠಾನದ ವಿಶೇಷಾಧಿಕಾರಿ ಪ್ರೊ.ಎಸ್.ಶಿವರಾಜಪ್ಪ ತಿಳಿಸಿದರು.
ನಗರದ ಖಿಲ್ಲೆ ಮೊಹಲ್ಲಾದ ನಟರಾಜ ಮಹಿಳಾ ವಸತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಅಂತಿಮ ಬಿ.ಎ., ಬಿ.ಕಾಂ. ವಿದ್ಯಾರ್ಥಿನಿಯರಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.
‘ವಿದ್ಯಾರ್ಥಿನಿಯರು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಹೆಚ್ಚಿನ ಆದ್ಯತೆ ನೀಡಬೇಕು. ಮುಂದಿನ ಸ್ಪರ್ಧಾತ್ಮಕ ಯುಗಕ್ಕೆ ಸಜ್ಜಾಗಲು ಈಗಿನಿಂದಲೇ ಪರಿಶ್ರಮ ವಹಿಸಿ ಓದಬೇಕು. ಬಹಳ ಜಾಗರೂಕತೆಯಿಂದ ಹೆಜ್ಜೆ ಇಡಬೇಕು’ ಎಂದು ಸಲಹೆ ನೀಡಿದರು.
ಪ್ರಾಂಶುಪಾಲರಾದ ಎಂ.ಶಾರದಾ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ವಿಭಾಗದ ಮುಖ್ಯಸ್ಥ ಜಿ.ಪ್ರಸಾದ ಮೂರ್ತಿ, ವಾಣಿಜ್ಯ ವಿಭಾಗದ ಮುಖ್ಯಸ್ಥ ಸೂರಜ್ ಎಂ.ಎನ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.