ADVERTISEMENT

ಮೈಸೂರು: ವಿಷ್ಣುವರ್ಧನ್ ಕುರಿತು ಸರ್ಕಾರದ ನಿರ್ಲಕ್ಷ್ಯ; ಅಸಮಾಧಾ‌ನ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2021, 7:41 IST
Last Updated 15 ಡಿಸೆಂಬರ್ 2021, 7:41 IST
ಡಾ.ವಿಷ್ಣು ಸೇನಾ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಡಾ.ವಿಷ್ಣು ಸೇನಾ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.   

ಮೈಸೂರು: ನಟ ವಿಷ್ಣುವರ್ಧನ್ ಕುರಿತು ಸರ್ಕಾರ ಉದ್ದೇಶಪೂರ್ವಕವಾಗಿಯೆ ನಿರ್ಲಕ್ಷ್ಯ ಧೋರಣೆ ತಳೆದಿದೆ ಎಂದು ಡಾ.ವಿಷ್ಣು ಸೇನಾ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಸರ್ಕಾರದ ಮೇಲಿನ ನಂಬಿಕೆಯನ್ನು ನಾವು ಕಳೆದುಕೊಂಡಿದ್ದೇವೆ. ಹೀಗಾಗಿ ವಿಷ್ಣುವರ್ಧನ್ ಅವರ ಅಮೃತ ಜನ್ಮದಿನೋತ್ಸವದ ಸಿದ್ಧತಾ ಕಾರ್ಯಗಳನ್ನು ಈಗಿನಿಂದಲೇ ನಡೆಸಲಾಗುತ್ತಿದೆ ಎಂದು ಹೇಳಿದರು.

ಇವರ 75ನೇ ಜನ್ಮದಿನೋತ್ಸವ 2025ನೇ ಸೆಪ್ಟೆಂಬರ್18 ಕ್ಕೆ ಇದೆ. ಅಂದು ಪ್ರತಿ ಹೋಬಳಿ, ತಾಲ್ಲೂಕು, ಮತ್ತು ಜಿಲ್ಲಾ ಕೇಂದ್ರಗಳಲ್ಲೂ ಕಾರ್ಯಕ್ರಮ ಆಯೋಜಿಸಲಾಗುವುದು. ಬಡ ವಿದ್ಯಾರ್ಥಿಗಳಿಗಾಗಿ ಡಾ.ವಿಷ್ಣುವರ್ಧನ್ ಸ್ಪರ್ಧಾತ್ಮಕ ಅಕಾಡೆಮಿ ಸ್ಥಾಪನೆ, 10 ಲಕ್ಷ ಸಸಿ ನೆಡುವುದು, ವಿಷ್ಣುವರ್ಧನ್ ಅವರ ಬದುಕು ಸಾಧನೆ ಕುರಿತ ಕಿರು ಪುಸ್ತಕ ಬಿಡುಗಡೆ, ದುಬೈನಲ್ಲಿ ಅಂತರರಾಷ್ಟ್ರೀಯ ಉತ್ಸವ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

ADVERTISEMENT

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಲೋಹಿತ್ ಗೌಡ, ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.