ADVERTISEMENT

ಮೈಸೂರು ಮೇಯರ್ ಆಗಿ ಬಿಜೆಪಿಯ ಸುನಂದಾ ಪಾಲನೇತ್ರ ಆಯ್ಕೆ

ಜೆಡಿಎಸ್- ಕಾಂಗ್ರೆಸ್ ನಡುವೆ ಮೂಡದ ಮೈತ್ರಿ: ಪಾಲಿಕೆಯಲ್ಲಿ ಮೊದಲ ಬಾರಿ ಅರಳಿದ ಕಮಲ

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2021, 7:54 IST
Last Updated 25 ಆಗಸ್ಟ್ 2021, 7:54 IST
ಮೈಸೂರಿನ ನೂತನ ಮೇಯರ್ ಆಗಿ ಆಯ್ಕೆಯಾದ ಬಿಜೆಪಿಯ ಸುನಂದಾ ಪಾಲನೇತ್ರ ಅವರಿಗೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅಭಿನಂದನೆ ಸಲ್ಲಿಸಿದರು. ಸಂಸದ ಪ್ರತಾಪ ಸಿಂಹ, ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ ಇದ್ದಾರೆ.
ಮೈಸೂರಿನ ನೂತನ ಮೇಯರ್ ಆಗಿ ಆಯ್ಕೆಯಾದ ಬಿಜೆಪಿಯ ಸುನಂದಾ ಪಾಲನೇತ್ರ ಅವರಿಗೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅಭಿನಂದನೆ ಸಲ್ಲಿಸಿದರು. ಸಂಸದ ಪ್ರತಾಪ ಸಿಂಹ, ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ ಇದ್ದಾರೆ.   

ಮೈಸೂರು: ಮೈಸೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಮುರಿದು ಬಿದ್ದಿದ್ದು, ಮೇಯರ್ ಆಗಿ ಬಿಜೆಪಿಯ ಸುನಂದಾ ಪಾಲನೇತ್ರ ಆಯ್ಕೆಯಾದರು.

ಮೇಯರ್ ಸ್ಥಾನ ತಮಗೇ ಬೇಕು ಎಂದು ಪಟ್ಟುಹಿಡಿದ ಕಾಂಗ್ರೆಸ್ ಮತ್ತು ಜೆಡಿಎಸ್ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಬಿಜೆಪಿಗೆ ಲಾಭವಾಗಿ ಪರಿಣಮಿಸಿತು.

ಬುಧವಾರ ನಡೆದ ಚುನಾವಣೆಯಲ್ಲಿ ಸುನಂದಾ 26 ಮತಗಳನ್ನು ಪಡೆದರೆ, ಜೆಡಿಎಸ್ ನ ಅಶ್ವಿನಿ ಅನಂತು 22 ಹಾಗೂ ಕಾಂಗ್ರೆಸ್ ನ ಎಚ್.ಎಂ.ಶಾಂತಕುಮಾರಿ 22 ಮತಗಳನ್ನು ಪಡೆದುಕೊಂಡರು.

ADVERTISEMENT

ಮೈಸೂರು ಪಾಲಿಕೆಯ ಇತಿಹಾಸದಲ್ಲಿ ಬಿಜೆಪಿ ಗೆ ಮೇಯರ್ ಸ್ಥಾನ ಸಿಕ್ಕಿದ್ದು ಇದೇ ಮೊದಲು.

ಮೇಯರ್ ಸ್ಥಾನ ಬಿಜೆಪಿಗೆ ಸಿಗುವುದು ಖಚಿತವಾಗುತ್ತಿದ್ದಂತೆಯೇ ಶಾಸಕ ತನ್ವೀರ್ ಸೇಠ್ ಹಾಗೂ ಕಾಂಗ್ರೆಸ್ ಸದಸ್ಯರು ಜೆಡಿಎಸ್ ಗೆ ಧಿಕ್ಕಾರ ಕೂಗುತ್ತಾ ಸಭೆಯಿಂದ ಹೊರನಡೆದರು.

ಜೆಡಿಎಸ್ ನಿಂದ ಮೇಯರ್ ಆಗಿದ್ದ ರುಕ್ಮಿಣಿ ಮಾದೇಗೌಡ ಅವರ ಪಾಲಿಕೆ ಸದಸ್ಯತ್ವ ರದ್ದಾಗಿದ್ದರಿಂದ ಚುನಾವಣೆ ನಡೆದಿದೆ.ಮೇಯರ್‌ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು.

ಮೊದಲ ಎರಡು ಅವಧಿಗೆ ಕ್ರಮವಾಗಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ಮೇಯರ್ಸ್ಥಾನ ಪಡೆದುಕೊಂಡಿತ್ತು. ಒಪ್ಪಂದದ ಪ್ರಕಾರ ಮೂರನೇ ಅವಧಿ ಕಾಂಗ್ರೆಸ್‌ಗೆ ಲಭಿಸಬೇಕಿತ್ತು. ಕೊನೆಯ ಕ್ಷಣದಲ್ಲಿ ಆದ ಬೆಳವಣಿಗೆಗಳಿಂದ ರುಕ್ಮಿಣಿಮೇಯರ್‌ ಆಗಿದ್ದರು. ಆದರೆ ನಾಲ್ಕು ತಿಂಗಳಲ್ಲೇ ಅವರ ಅಧಿಕಾರ ಕೊನೆಗೊಂಡಿತ್ತು.

ಇದೀಗ ಜೆಡಿಎಸ್- ಕಾಂಗ್ರೆಸ್ ನಡುವಿನ ಜಿದ್ದಾಜಿದ್ದಿಯಿಂದಾಗಿ ಪಾಲಿಕೆ ಮೇಯರ್ ಸ್ಥಾನ ಬಿಜೆಪಿಗೆ ಲಭಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.