ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮುಡಾ ಮಾಜಿ ಅಧ್ಯಕ್ಷ ಎಚ್.ವಿ. ರಾಜೀವ್
ಮೈಸೂರು: ಮುಡಾ ಮಾಜಿ ಅಧ್ಯಕ್ಷ, ಮೈಸೂರು ಜಿಲ್ಲಾ ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷ ಎಚ್.ವಿ.ರಾಜೀವ್ ಅವರು ಬೆಂಬಲಿಗರೊಂದಿಗೆ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾದರು.
ವಿದ್ಯಾರಣ್ಯಪುರಂನ ಭೂತಾಳೆ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ದಿನೇಶ್ ಗುಂಡೂರಾವ್, ಕೆ.ವೆಂಕಟೇಶ್ ಮುಖಂಡರನ್ನು ಬರಮಾಡಿಕೊಂಡರು.
ಜೆಡಿಎಸ್ ತೊರೆದಿದ್ದ ನಗರಪಾಲಿಕೆಯ ಮಾಜಿ ಸದಸ್ಯ ಕೆ.ವಿ. ಮಲ್ಲೇಶ್, ಮಾಜಿ ಮೇಯರ್ ಬಿ.ಎಲ್. ಭೈರಪ್ಪ, ಸಹಕಾರಿ ಮುಖಂಡ ಓಂಪ್ರಕಾಶ್ ಕೂಡ ಕಾಂಗ್ರೆಸ್ ಸೇರ್ಪಡೆಯಾದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.