ADVERTISEMENT

ರಿಮೋಟ್‌ಗೆ ಬಳಸುವ ಶೆಲ್ ನುಂಗಿದ್ದ ಒಂದೂವರೆ ವರ್ಷದ ಮಗು ಸಾವು

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2020, 7:00 IST
Last Updated 4 ಸೆಪ್ಟೆಂಬರ್ 2020, 7:00 IST
ಮೃತ ಮಗು ಹೇಮಂತ್ ಸ್ಕಂದಮಣಿರಾಜ್
ಮೃತ ಮಗು ಹೇಮಂತ್ ಸ್ಕಂದಮಣಿರಾಜ್   

ಮೈಸೂರು: ರಿಮೋಟ್‌ಗೆ ಬಳಸುವ ಶೆಲ್ ನುಂಗಿದ್ದ ಒಂದೂವರೆ ವರ್ಷದ ಮಗು ಮೃತಪಟ್ಟಿದೆ.

ಮೈಸೂರಿನ ಇಟ್ಟಿಗೆಗೂಡಿನಲ್ಲಿ ಘಟನೆ ನಡೆದಿದ್ದು, ಮೃತ ಮಗುವನ್ನು ಹೇಮಂತ್ ಸ್ಕಂದಮಣಿರಾಜ್ ಎಂದು ಗುರುತಿಸಲಾಗಿದೆ.

ಆಗಸ್ಟ್ 31ರಂದು ಮನೆಯಲ್ಲಿ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಮಗು ಶೆಲ್ ನುಂಗಿತ್ತು. ಬಳಿಕ ಚಿಕಿತ್ಸೆಗಾಗಿ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ಮುಂಜಾನೆ ಮಗು ಮೃತಪಟ್ಟಿದೆ.
ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.