ಮೈಸೂರು ಅರಮನೆ
ಪ್ರಜಾವಾಣಿ ಚಿತ್ರ: ರಂಜು ಪಿ
ಮೈಸೂರು: ಮೈಸೂರು ರಾಜಮನೆತನದವರು ಅರಮನೆಯಲ್ಲಿ ದಸರಾ ನಿಮಿತ್ತ ಧಾರ್ಮಿಕ ಕಾರ್ಯಗಳನ್ನು ಕೈಗೊಳ್ಳುವ ದಿನಗಳಲ್ಲಿ ಸಾರ್ವಜನಿಕರು, ಪ್ರವಾಸಿಗರಿಗೆ ವೀಕ್ಷಣೆಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಸಿಂಹಾಸನ ಜೋಡಣೆ ಪ್ರಯುಕ್ತ ಸೆ.16ರಂದು ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ, ‘ಖಾಸಗಿ ದರ್ಬಾರ್’ನಲ್ಲಿ ಪೂಜಾ ಕಾರ್ಯದ ಪ್ರಯುಕ್ತ ಸೆ.22ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ಪ್ರವೇಶ ಇರುವುದಿಲ್ಲ.
ಅ.1ರ ಆಯುಧಪೂಜೆಯಂದು ಸಂಪೂರ್ಣ ದಿನ ಪ್ರವೇಶ ಇರುವುದಿಲ್ಲ. ಅ.2ರಂದು ದಸರಾ ಪಾಸ್, ಟಿಕೆಟ್ ಪಡೆದವರಿಗೆ ಪ್ರವೇಶ ಇರಲಿದೆ. ಅ.31ರಂದು ಸಿಂಹಾಸನ ವಿಸರ್ಜನೆ ಪ್ರಯುಕ್ತ ಬೆಳಿಗ್ಗೆ 10ರಿಂದ 12ರವರೆಗೆ ಪ್ರವೇಶ ಇರುವುದಿಲ್ಲ.
ಸೆ.15ರಿಂದ ಅ.12ರವರೆಗೆ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ. ಅ.13ರಿಂದ ಎಂದಿನಂತೆ ಕಾರ್ಯಕ್ರಮ ಸಂಜೆ ಇರಲಿದೆ ಎಂದು ಎಂದು ಮೈಸೂರು ಅರಮನೆ ಆಡಳಿತ ಮಂಡಳಿಯ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.