ADVERTISEMENT

Mysuru Dasara: ವಿದ್ಯುತ್ ದೀಪಾಲಂಕಾರ ಒಂಬತ್ತು ದಿನ ವಿಸ್ತರಣೆ- ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2021, 10:51 IST
Last Updated 15 ಅಕ್ಟೋಬರ್ 2021, 10:51 IST
ಮೈಸೂರಿನಲ್ಲಿ ಶುಕ್ರವಾರ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಅವರ ಪತ್ನಿ ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ  ಆಶೀರ್ವಾದ ಪಡೆದರು.
ಮೈಸೂರಿನಲ್ಲಿ ಶುಕ್ರವಾರ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಅವರ ಪತ್ನಿ ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಆಶೀರ್ವಾದ ಪಡೆದರು.   

ಮೈಸೂರು: ವಿದ್ಯುತ್ ದೀಪಾಲಂಕಾರವನ್ನು ಒಂಬತ್ತು ದಿನಗಳವರೆಗೆ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಇಲ್ಲಿ ಘೋಷಿಸಿದರು.

ಸುತ್ತೂರು ಮಠಕ್ಕೆ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

'ನಾಡಿನ ವಿವಿಧ ಕಡೆಗಳಿಂದ ಪ್ರವಾಸಿಗರು ಹೆಚ್ಚಿನ ಪ್ರಮಾಣದಲ್ಲಿ ಮೈಸೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜೊತೆಗೆ ಜನಪ್ರತಿನಿಧಿಗಳು ಮತ್ತು ಸ್ಥಳೀಯರ ಬೇಡಿಕೆಯ ಮೇರೆಗೆ ವಿದ್ಯುತ್ ದೀಪಾಲಂಕಾರ ವಿಸ್ತರಿಸಲಾಗುತ್ತಿದೆ' ಎಂದು ತಿಳಿಸಿದರು.

ಈ ಮೊದಲು ನಿಗದಿಪಡಿಸಿದಂತೆ ದೀಪಾಲಂಕಾರ ಶುಕ್ರವಾರಕ್ಕೆ (ಅ.15) ಕೊನೆಗೊಳ್ಳಬೇಕಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.