ADVERTISEMENT

ಮೈಸೂರು: ಲಾಕ್‌ಡೌನ್‌ ಅವಧಿಯ ವೇತನ ಪಾವತಿಗೆ ಒತ್ತಾಯ

ಕರ್ನಾಟಕ ರಾಜ್ಯ ಸಂಯುಕ್ತ ವಸತಿನಿಲಯ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ಜೂನ್ 2020, 10:00 IST
Last Updated 10 ಜೂನ್ 2020, 10:00 IST
ಹೊರಗುತ್ತಿಗೆ ಕಾರ್ಮಿಕರಿಗೆ ಲಾಕ್‌ಡೌನ್‌ ಅವಧಿ ಮತ್ತು ಜೂನ್ ತಿಂಗಳ ವೇತನವನ್ನು ಪಾವತಿಸಬೇಕು ಎಂದು ಒತ್ತಾಯಿಸಿ ಕಾರ್ಮಿಕರು ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದರು
ಹೊರಗುತ್ತಿಗೆ ಕಾರ್ಮಿಕರಿಗೆ ಲಾಕ್‌ಡೌನ್‌ ಅವಧಿ ಮತ್ತು ಜೂನ್ ತಿಂಗಳ ವೇತನವನ್ನು ಪಾವತಿಸಬೇಕು ಎಂದು ಒತ್ತಾಯಿಸಿ ಕಾರ್ಮಿಕರು ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದರು   

ಮೈಸೂರು: ಹಾಸ್ಟೆಲ್, ವಸತಿಶಾಲೆ ಮತ್ತು ಆಶ್ರಮ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ಕಾರ್ಮಿಕರಿಗೆ ಲಾಕ್‌ಡೌನ್‌ ಅವಧಿ ಹಾಗೂ ಜೂನ್ ತಿಂಗಳ ವೇತನವನ್ನು ಪಾವತಿಸಬೇಕು ಎಂದು ಒತ್ತಾಯಿಸಿ ಕಾರ್ಮಿಕರು ಪ್ರತಿಭಟನೆ ನಡೆಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮಂಗಳವಾರ ಕರ್ನಾಟಕ ರಾಜ್ಯ ಸಂಯುಕ್ತ ವಸತಿನಿಲಯ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಸೇರಿದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಲಾಕ್‌ಡೌನ್‌ ಅವಧಿಯಲ್ಲಿ ಎಲ್ಲ ಗುತ್ತಿಗೆ ಕಾರ್ಮಿಕರಿಗೂ ವೇತನ ನೀಡಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಆದರೆ, ಕೆಲವು ಜಿಲ್ಲೆಗಳಲ್ಲಿನ ಅಧಿಕಾರಿಗಳು ವೇತನ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

ಸರ್ಕಾರ ತನ್ನ ಆದೇಶವನ್ನು ಜಾರಿಗೆ ತರುವ ಮೂಲಕ ಒಬ್ಬ ಮಾದರಿ ಉದ್ಯೋಗದಾತನಾಗಬೇಕು ಎಂದು ಒತ್ತಾಯಿಸಿದರು.

ಸಮಾಜ ಕಲ್ಯಾಣ ಇಲಾಖೆಯಲ್ಲಿ ಬಾಕಿ ಇರುವ ಹಲವು ತಿಂಗಳ ವೇತನವನ್ನು ಪಾವತಿಸಬೇಕು, ಕ್ವಾರಂಟೈನ್ ಕೇಂದ್ರಗಳಾಗಿ ಪರಿವರ್ತಿತವಾದ ಹಾಸ್ಟೆಲ್, ವಸತಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುವ ಇಲಾಖೆಯ ಹೊರಗುತ್ತಿಗೆ ಸಿಬ್ಬಂದಿಗೆ ವಿಶೇಷ ಭತ್ಯೆ ನೀಡಬೇಕು, ಗುತ್ತಿಗೆ ಕಾರ್ಮಿಕರ ಸೇವಾ ಹಿರಿತನಕ್ಕೆ ಅನುಗುಣವಾಗಿ ಇತರೆ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳಿಗೆ ನೇಮಕ ಮಾಡಬೇಕು ಎಂದು ಅವರು ಆಗ್ರಹಿಸಿದರು. ಸಂಘಟನೆಯ ಜಿಲ್ಲಾ ಘಟಕದ ಕಾರ್ಯದರ್ಶಿ ಎನ್.ಮುದ್ದುಕೃಷ್ಣ ಸೇರಿದಂತೆ ಹಲವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.