ADVERTISEMENT

ಮೈಸೂರಿನಲ್ಲಿ ಮುಂದುವರಿದ ಚಿತ್ತಾ ಮಳೆ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2019, 11:00 IST
Last Updated 19 ಅಕ್ಟೋಬರ್ 2019, 11:00 IST
ಮೈಸೂರಿನಲ್ಲಿ ಶುಕ್ರವಾರ ಸುರಿದ ಮಳೆಯಲ್ಲೇ ಹೆಜ್ಜೆ ಹಾಕಿದ ಯುವತಿ
ಮೈಸೂರಿನಲ್ಲಿ ಶುಕ್ರವಾರ ಸುರಿದ ಮಳೆಯಲ್ಲೇ ಹೆಜ್ಜೆ ಹಾಕಿದ ಯುವತಿ   

ಮೈಸೂರು: ನಗರದಲ್ಲಿ ಶುಕ್ರವಾರ ರಾತ್ರಿ ಹಲವೆಡೆ ಧಾರಾಕಾರ ಮಳೆ ಸುರಿಯಿತು. ಒಮ್ಮೆಗೆ ಬಂದ ಮಳೆ ಅತಿ ಜೋರಾಯಿತ್ತು. ಕೆಲವೆಡೆ ರಸ್ತೆ ಕಾಣದಷ್ಟು ಹನಿಗಳು ದಟ್ಟವಾಗಿ ಬೀಳುತ್ತಿದ್ದವು.

ಕಳೆದೊಂದು ವಾರದಿಂದ ಬೀಳುತ್ತಿರುವ ಮಳೆಯಿಂದ ಈಗಾಗಲೇ ರೈತಾಪಿ ಸಮುದಾಯದಲ್ಲಿ ಸಮಾಧಾನ ಮೂಡಿಸಿದೆ. ಹಿಂಗಾರು ಬೆಳೆಗಳು ಉತ್ತಮವಾಗಿ ಇಳುವರಿ ನೀಡಬಹುದು ಎಂಬ ಆಶಾಭಾವನೆ ಮೂಡಿಸಿದೆ.

ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿ ಅತ್ಯಧಿಕ ಮಳೆ 3.3 ಸೆಂಟಿಮೀಟರ್‌ನಷ್ಟು ಸುರಿದಿದೆ. ಇದನ್ನು ಬಿಟ್ಟರೆ ಮೈಸೂರಿನ ದೇವಲಾಪುರದ ಆಸುಪಾಸಿನಲ್ಲಿ 2.6 ಸೆ.ಮೀನಷ್ಟು ಮಳೆಯಾಗಿದೆ. ಉಳಿದ ಎಲ್ಲ ತಾಲ್ಲೂಕುಗಳಲ್ಲೂ ಹಗುರದಿಂದ ಸಾಧಾರಣ ಮಳೆ ಬಿದ್ದಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮೂಲಗಳು ತಿಳಿಸಿವೆ.

ADVERTISEMENT

ನಗರದ ಸಿದ್ದಾರ್ಥ ಬಡಾವಣೆಯಲ್ಲಿ ಮರವೊಂದು ವಿದ್ಯುತ್ ತಂತಿಯ ಮೇಲೆ ಬಿದ್ದು ಆತಂಕ ಸೃಷ್ಟಿಸಿತು. ಸ್ಥಳಕ್ಕೆ ಬಂದ ಸೆಸ್ಕ್‌ ತಂಡವು ಇದನ್ನು ತೆರವುಗೊಳಿಸಿತು. ಉಳಿದಂತೆ, ನಗರದ ಕೆಲವೆಡೆ ತಗ್ಗುಪ್ರದೇಶಗಳಿಗೆ ನೀರು ನುಗ್ಗಿತು. ರಸ್ತೆಗಳಲ್ಲಿ ಮೊಟಕಾಲುದ್ದ ನೀರು ಹರಿಯುತ್ತಿದ್ದುದ್ದರಿಂದ ವಾಹನ ಸವಾರರು ಪರದಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.