ಮೈಸೂರು: ಜನದಟ್ಟಣೆಯಿಂದ ಕೊರೊನಾ ಹೆಚ್ಚುವ ಆತಂಕದಿಂದಾಗಿ, ಜಿಲ್ಲೆಯ ಪ್ರವಾಸಿತಾಣಗಳ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ.
ದಸರಾ ಉದ್ಘಾಟನಾ ಸಮಾರಂಭದಲ್ಲಿ ಈ ವಿಷಯ ಪ್ರಕಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ‘ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಲಾಗಿದ್ದು, ಪ್ರವಾಸಿಗರ ಅನುಕೂಲತೆಯ ದೃಷ್ಟಿಯಿಂದ ನಿರ್ಬಂಧ ಹಿಂತೆಗೆಯುವಂತೆ ಸೂಚಿಸಿದ್ದಾರೆ’ ಎಂದರು.
ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಕೋವಿಡ್ ಮಾರ್ಗಸೂಚಿ ಪಾಲಿಸುವುದರೊಂದಿಗೆ ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಅವಕಾಶ ಕಲ್ಪಿಸಲು ಸೂಚಿಸಿದ್ದಾರೆ ಎಂದರು.
ಅ.17ರಿಂದ ನ.1ರವರೆಗೆ ಮೈಸೂರು ಅರಮನೆ, ಚಾಮುಂಡಿ ಬೆಟ್ಟ, ಪ್ರಾಣಿಸಂಗ್ರಹಾಲಯ ಹಾಗೂ ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಿ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.