ಮೈಸೂರು: ಮೈಸೂರು ವಿಶ್ವವಿದ್ಯಾ ಲಯದ 100ನೇ ಘಟಿಕೋತ್ಸವ ಅ.19ರಂದು ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯಿಂದ ವರ್ಚುವಲ್ ವೇದಿಕೆಯಲ್ಲಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.
ವಿಶ್ವವಿದ್ಯಾಲಯದ ಕ್ರಾಫರ್ಡ್ ಹಾಲ್‌ನಲ್ಲಿ ಅಂದು ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು,ರಾಜ್ಯಪಾಲ ವಜುಭಾಯಿ ವಾಲಾಅಧ್ಯಕ್ಷತೆ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಪಾಲ್ಗೊಳ್ಳಲಿದ್ದಾರೆ ಎಂದು ಕುಲಸಚಿವ ಪ್ರೊ.ಆರ್.ಶಿವಪ್ಪ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.