ADVERTISEMENT

ಮೈಸೂರು: ಕೆಲಸದಲ್ಲಿ ಮುಂದುವರಿಸಲು ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2020, 9:02 IST
Last Updated 28 ಆಗಸ್ಟ್ 2020, 9:02 IST
ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿನ ಹಾಸ್ಟೆಲ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವವರನ್ನು ಕೆಲಸದಿಂದ ತೆಗೆಯಬಾರದು ಎಂದು ಒತ್ತಾಯಿಸಿ ಕ್ರಾಫರ್ಡ್ ಭವನದ ಮುಂಭಾಗ ಶುಕ್ರವಾರ ಕಾರ್ಮಿಕರು ಪ್ರತಿಭಟನೆ ನಡೆಸಿದರು
ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿನ ಹಾಸ್ಟೆಲ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವವರನ್ನು ಕೆಲಸದಿಂದ ತೆಗೆಯಬಾರದು ಎಂದು ಒತ್ತಾಯಿಸಿ ಕ್ರಾಫರ್ಡ್ ಭವನದ ಮುಂಭಾಗ ಶುಕ್ರವಾರ ಕಾರ್ಮಿಕರು ಪ್ರತಿಭಟನೆ ನಡೆಸಿದರು   

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿನ ಹಾಸ್ಟೆಲ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವವರನ್ನು ಕೆಲಸದಿಂದ ತೆಗೆಯಬಾರದು ಎಂದು ಒತ್ತಾಯಿಸಿ ಕ್ರಾಫರ್ಡ್ ಭವನದ ಮುಂಭಾಗ ಶುಕ್ರವಾರ ಕಾರ್ಮಿಕರು ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ಸಂಯುಕ್ತ ವಸತಿನಿಲಯ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಸೇರಿದ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು.

ಲಾಕ್‌ಡೌನ್‌ ಅವಧಿಯ ವೇತನವನ್ನು ಕಾರ್ಮಿಕರಿಗೆ ಚೆಕ್‌ ಮೂಲಕ ಪಾವತಿಸಬೇಕು, ಇಪಿಎಫ್ ಹಣವನ್ನು ಪಾವತಿಸಿರುವ ಕುರಿತು ದಾಖಲಾತಿಗಳನ್ನು ನೀಡಬೇಕು, ಇಎಸ್ಐ ಹಣವನ್ನು ಪಾವತಿ ಮಾಡದಿರುವ ಗುತ್ತಿಗೆದಾರರಿಂದಲೇ ಕಾರ್ಮಿಕರ ಚಿಕಿತ್ಸಾ ವೆಚ್ಚವನ್ನು ವಸೂಲು ಮಾಡಬೇಕು ಎಂದು ಆಗ್ರಹಿಸಿದರು.

ADVERTISEMENT

ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಮತ್ತು ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೇಶಕರಿಗೆ ಪ್ರತಿಭಟನಕಾರರು ಈ ಸಂಬಂಧ ಮನವಿ ಪತ್ರ ಸಲ್ಲಿಸಿದರು.

ಸಂಘಟನೆಯ ರಾಜ್ಯ ಘಟಕದ ಸಂಚಾಲಕ ಚಂದ್ರಶೇಖರ ಮೇಟಿ, ಪದಾಧಿಕಾರಿಗಳಾದ ಸಿದ್ದರಾಜು, ರಾಜು, ಹರೀಶ್, ಪಾಲಾಕ್ಷ, ಮಧುಚಂದ್ರ, ಸತೀಶ್ ಇದ್ದರು.

ಕಾನೂನುಬಾಹಿರ ಭೂ ಮಂಜುರಾತಿ ವಿರುದ್ಧ ಪ್ರತಿಭಟನೆ

ಮೈಸೂರು: ಎಚ್.ಡಿ.ಕೋಟೆ ಪಟ್ಟಣದಲ್ಲಿ ಕಾನೂನುಬಾಹಿರವಾಗಿ ಭೂ ಮಂಜೂರಾತಿ ಮಾಡಲಾಗಿದೆ ಎಂದು ಆರೋಪಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ನೇತೃತ್ವದಲ್ಲಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು.

ಪೆಟ್ರೊಲ್ ಬಂಕ್‌ವೊಂದರ ಸ್ಥಾಪನೆಗೆ ನಿರಾಪೇಕ್ಷಣಾ ಪತ್ರ ನೀಡುವಾಗ ಅಧಿಕಾರಿಗಳು ಮೂಲ ಕಡತವನ್ನು ಪರಿಶೀಲನೆ ಮಾಡಿಲ್ಲ. ಇದರ ವಿರುದ್ಧ ಈಗಾಗಲೇ ಮನವಿ ಸಲ್ಲಿಸಿದ್ದರೂ ಪರಿಗಣಿಸಿಲ್ಲ ಎಂದು ಆರೋಪಿಸಿದರು.

ಯಾವುದೇ ಮಾಹಿತಿ ಕೇಳಿದರೂ ಮೂಲಕಡತ ಲಭ್ಯ ಇಲ್ಲ ಎಂಬ ಸಿದ್ಧ ಉತ್ತರ ನೀಡುತ್ತಾರೆ. ಹಿರಿಯ ಅಧಿಕಾರಿಗಳು ಈ ಕೂಡಲೇ ಗಮನಹರಿಸಬೇಕು ಎಂದು ಒತ್ತಾಯಿಸಿದರು.

ಸಂಘಟನೆಯ ಜಿಲ್ಲಾ ಉಪಪ್ರಧಾನ ಸಂಚಾಲಕ ದೊಡ್ಡಸಿದ್ದು ಹಾದನೂರು, ಜಿಲ್ಲಾ ಘಟಕದ ಸಂಚಾಲಕ ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ಸೋಮಣ್ಣ ಬನ್ನೇಹಳ್ಳಿ, ಸಂಚಾಲಕಿ ವಸಂತ ಹೊನ್ನೇನಹಳ್ಳಿ, ಚಂದ್ರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.