ವಿ.ಕೆ.ನಟರಾಜ್
ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಅಭಿವೃದ್ಧಿ ಅಧ್ಯಯನ ವಿಭಾಗದ ಪ್ರಾಧ್ಯಾಪಕರೂ, ಮುಖ್ಯಸ್ಥರೂ ಆಗಿದ್ದ ಪ್ರೊ.ವಿ.ಕೆ.ನಟರಾಜ್ (85) ಅನಾರೋಗ್ಯದಿಂದ ಸೋಮವಾರ ಬೆಳಿಗ್ಗೆ ನಿಧನರಾದರು.
ಅವರಿಗೆ ಇಬ್ಬರು ಪುತ್ರಿಯರು ಇದ್ದಾರೆ. ನಿವೃತ್ತಿ ನಂತರ ಚೆನ್ನೈನ ಎಂಐಡಿಎಸ್ (ಮದ್ರಾಸ್ ಇನ್ಸ್‌ಟಿಟ್ಯೂಟ್ ಆಫ್ ಡೆವಲಪ್‌ಮೆಂಟಲ್ ಸ್ಟಡೀಸ್) ನಿರ್ದೇಶಕರಾಗಿದ್ದರು. ಬಳಿಕ ಇಂಡೊ- ಕೆನಡಿಯನ್ ಸ್ಟಡಿ ಸೆಂಟರ್ ಸಂದರ್ಶಕ ಪ್ರಾಧ್ಯಾಪಕರಾಗಿದ್ದರು.
ಅರ್ಥಶಾಸ್ತ್ರ ಕುರಿತು ಇಂಗ್ಲಿಷ್ ಪತ್ರಿಕೆಗಳಿಗೆ ಲೇಖನ ಬರೆಯುತ್ತಿದ್ದ ಅವರು, ವಲ್ಡ್೯ ಬ್ಯಾಂಕಿನ ಸಲಹೆಗಾರರಾಗಿದ್ದರು. ಖ್ಯಾತ ಸರೋದ್ ವಾದಕರಾಗಿದ್ದ ಪಂ.ರಾಜೀವ ತಾರಾನಾಥರ ಆತ್ಮೀಯರೂ ಆಗಿದ್ದರು.
ಅವರ ಅಂತ್ಯಕ್ರಿಯೆ ಮಂಗಳವಾರ (ಡಿ.10) ಬೆಳಿಗ್ಗೆ ಇಲ್ಲಿನ ವಿಜಯನಗರದ ಶಾಂತಿಧಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಅವರ ದೇಹವನ್ನು ಮಂಗಳವಾರ ಬೆಳಿಗ್ಗೆ 11ಕ್ಕೆ ನಗರದ ಜೆಎಸ್‌ಎಸ್ ಆಸ್ಪತ್ರೆಗೆ ದಾನವಾಗಿ ನೀಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.