ADVERTISEMENT

ನಾಯಿಗೆ ಲೈಂಗಿಕ ಕಿರುಕುಳ: ಯುವಕ ಬಂಧನ

ಮೈಸೂರಿನ ಸ್ಪೆಷಾಲಿಟಿ ಪಶುವೈದ್ಯಕೀಯ ಆಸ್ಪತ್ರೆಯಲ್ಲಿ ಶ್ವಾನದ ವೈದ್ಯಕೀಯ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2021, 10:01 IST
Last Updated 16 ಫೆಬ್ರುವರಿ 2021, 10:01 IST
ಸೋಮಶೇಖರ್‌
ಸೋಮಶೇಖರ್‌   

ಮೈಸೂರು: ಬೀದಿ ನಾಯಿಗೆ ಲೈಂಗಿಕ ಕಿರುಕುಳ ನೀಡಿ, ಪೈಶಾಚಿಕ ಕೃತ್ಯ ಎಸಗಿದ ಆರೋಪದಲ್ಲಿ ನಗರದ ವಿ.ವಿ.ಪುರಂ ಪೊಲೀಸರು ಯುವಕನೊಬ್ಬನ್ನು ಬಂಧಿಸಿದ್ದಾರೆ.

ನಗರದ ಗೋಕುಲಂನ 2ನೇ ಹಂತದ ಎಂಸಿಸಿ ಕಾಲೊನಿಯ ಯುವಕ ಸೋಮಶೇಖರ್‌ ಬಂಧಿತ ಆರೋಪಿ.

ಗೋಕುಲಂನ 3ನೇ ಹಂತದ ಗಣಪತಿ ದೇವಸ್ಥಾನದ ರಸ್ತೆ ಬಳಿ ಫೆ.11ರ ರಾತ್ರಿ ಆರೋಪಿ ಸೋಮಶೇಖರ್‌ ಹೆಣ್ಣು ನಾಯಿಯ ಮೇಲೆ ಅತ್ಯಾಚಾರ ಎಸಗುತ್ತಿದ್ದ ಪೈಶಾಚಿಕ ಕೃತ್ಯವನ್ನು ದಾರಿಹೋಕರೊಬ್ಬರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದರು. ಈ ದುಷ್ಕೃತ್ಯದ ವಿಡಿಯೊ ವೈರಲ್‌ ಆಗಿತ್ತು. ವಿಡಿಯೋದಲ್ಲಿನ ದೃಶ್ಯಗಳನ್ನು ಆಧರಿಸಿ ಪೀಪಲ್ ಫಾರ್ ಅನಿಮಲ್ಸ್ (ಪಿಎಫ್ಎ)ಸಂಸ್ಥೆಯ ಪ್ರಾಣಿ ಕ್ಷೇಮಾಭಿವೃದ್ಧಿ ಅಧಿಕಾರಿ ಕೆ.ಬಿ. ಹರೀಶ್ ವಿ.ವಿ.ಪುರಂ ಪೊಲೀಸರಿಗೆ ದೂರು ನೀಡಿದ್ದಾರೆ.

ADVERTISEMENT

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ ಪೊಲೀಸರು, ಬಂಧಿಸಿದ್ದಾರೆ.

ದುಷ್ಕೃತ್ಯ ಎಸಗಿರುವ ಸೋಮಶೇಖರ್‌ ವಿರುದ್ಧ ಐಪಿಸಿ ಸೆಕ್ಷನ್ 1860 (ಯು/ಎಸ್ -377: ಪ್ರಾಣಿಗಳ ಜತೆ ಲೈಂಗಿಕ ಕ್ರಿಯೆ ನಡೆಸುವುದು), ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವಿಕೆ ಮತ್ತು 1960 (ಯು/ಎಸ್-11(1)(ಎ)) ಅಡಿಯಲ್ಲಿ ವಿ.ವಿ.ಪುರಂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ನಾಯಿಯನ್ನು ಮಂಗಳವಾರ ಮೈಸೂರಿನ ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಸ್ಪೆಷಾಲಿಟಿ ಪಶುವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.