ಮೈಸೂರು: ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪರಿಮಳಾ ಶ್ಯಾಂ ಅವರ ಕಾರಿನ ಚಾಲಕ ಸುನಿಲ್ (25) ಅವರನ್ನು ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದಲ್ಲಿ ಮಚ್ಚಿನಿಂದ ಹೊಡೆದು ಶನಿವಾರ ರಾತ್ರಿ ಕೊಲೆ ಮಾಡಲಾಗಿದೆ.
ಇವರ ನೆರೆಮನೆಯಲ್ಲಿ ವಾಸವಿದ್ದ ಆರೋಪಿ ರವಿ (40) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಅನೈತಿಕ ಸಂಬಂಧದ ಕಾರಣಕ್ಕೆ ಸುನಿಲ್ ಕೊಲೆ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.