ADVERTISEMENT

ಮೈಸೂರು: ರನ್‌ವೇ ವಿಸ್ತರಣೆ; ತ್ವರಿತ ಕಾಮಗಾರಿಗೆ ಸೂಚನೆ

ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2025, 4:05 IST
Last Updated 2 ನವೆಂಬರ್ 2025, 4:05 IST
ಜಿ.ಪಂ. ಸಭಾಂಗಣದಲ್ಲಿ ಶನಿವಾರ ನಡೆದ ಸಭೆಯಲ್ಲಿ ಸಚಿವ ಡಾ. ಎಚ್‌.ಸಿ. ಮಹದೇವ‌ಪ್ಪ ಮಾತನಾಡಿದರು. ಯುಕೇಶ್‌ಕುಮಾರ್, ಜಿ.ಟಿ. ದೇವೇಗೌಡ, ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌, ತನ್ವೀರ್‌ ಸೇಠ್‌, ಲಕ್ಷ್ಮೀಕಾಂತ ರೆಡ್ಡಿ, ಶೇಖ್‌ ತನ್ವೀರ್‌ ಆಸಿಫ್ ಜೊತೆಗಿದ್ದರು – ಪ್ರಜಾವಾಣಿ ಚಿತ್ರ
ಜಿ.ಪಂ. ಸಭಾಂಗಣದಲ್ಲಿ ಶನಿವಾರ ನಡೆದ ಸಭೆಯಲ್ಲಿ ಸಚಿವ ಡಾ. ಎಚ್‌.ಸಿ. ಮಹದೇವ‌ಪ್ಪ ಮಾತನಾಡಿದರು. ಯುಕೇಶ್‌ಕುಮಾರ್, ಜಿ.ಟಿ. ದೇವೇಗೌಡ, ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌, ತನ್ವೀರ್‌ ಸೇಠ್‌, ಲಕ್ಷ್ಮೀಕಾಂತ ರೆಡ್ಡಿ, ಶೇಖ್‌ ತನ್ವೀರ್‌ ಆಸಿಫ್ ಜೊತೆಗಿದ್ದರು – ಪ್ರಜಾವಾಣಿ ಚಿತ್ರ   

ಮೈಸೂರು: ವಿಮಾನ ನಿಲ್ದಾಣ ವಿಸ್ತರಣೆಗಾಗಿ ಭೂಸ್ವಾಧೀನ ಕೆಲಸ ಚುರುಕುಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಜಿಲ್ಲೆಯ ಅಭಿವೃದ್ಧಿ ಕೆಲಸಗಳ ಕುರಿತು ಅಧಿಕಾರಿಗಳ ಜೊತೆಗಿನ ಸಭೆಯಲ್ಲಿ ಅವರು ಮಾತನಾಡಿದರು. ‘ವಿಮಾನ ನಿಲ್ದಾಣ ವಿಸ್ತರಣೆವಾಗಿ ವಶಪಡಿಸಿಕೊಂಡ ಜಮೀನಿನ ಪೈಕಿ ಈಗಾಗಲೇ 240 ಎಕರೆಗೆ ಭೂಮಾಲೀಕರಿಗೆ ಪರಿಹಾರ ನೀಡಲಾಗಿದೆ. ಉಳಿದ 40 ಎಕರೆ ಭೂಮಿಗೆ ಪರಿಹಾರ ನೀಡಲು ಕ್ರಮ ವಹಿಸಿ’ ಎಂದರು.

‘ಜಿಲ್ಲೆಯ ರಸ್ತೆಗಳನ್ನು ವೈಟ್ ಟಾಪಿಂಗ್ ಮಾಡಲು ₹393.85 ಕೋಟಿ ಅನುದಾನ ಒದಗಿಸಿದ್ದು, 46 ಕಿಮೀ ಉದ್ದದ 12 ರಸ್ತೆಗಳನ್ನು ಆಯ್ಕೆ ಮಾಡಲಾಗಿದೆ. ವೈಟ್ ಟಾಪಿಂಗ್ ಮಾಡುವುದರಿಂದ ರಸ್ತೆಯು ಹೆಚ್ಚು‌ ವರ್ಷಗಳ ಕಾಲ ಬಳಕೆಗೆ ಬರಲಿದೆ’ ಎಂದರು.

ADVERTISEMENT

ಶಾಸಕ ತನ್ವೀರ್ ಸೇಠ್ ‘ವಿಮಾನ ನಿಲ್ದಾಣ ವಿಸ್ತರಣೆ ಮಾಡುವುದರಿಂದ ಮೈಸೂರು ನಗರ ಅಭಿವೃದ್ಧಿಯಾಗಲಿದೆ. ಐ.ಟಿ ಕಂಪನಿಗಳ ಬೆಳವಣಿಗೆ ಹಾಗೂ ಸರಕು ಸಾಗಣೆ ಸೇವೆ ಹೆಚ್ಚಳವಾಗಲಿದೆ’ ಎಂದರು.

‘ವೈಟ್ ಟ್ಯಾಪಿಂಗ್‌ಗೆ ಮೊದಲು ರಸ್ತೆಗಳ ವಿಸ್ತರಣೆ, ಯು.ಜಿ.ಡಿ ಹಾಗೂ ಮೊದಲಾದ ಕಾಮಗಾರಿಗಳ ಕುರಿತು ಸ್ಥಳೀಯ ಶಾಸಕರ ಜೊತೆ ಚರ್ಚಿಸಿ’ ಎಂದು ಸಲಹೆ ನೀಡಿದರು.

ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್, ‘ಹೊಸ ಮೇಲ್ಸೆತುವೆ, ಟನಲ್‌ಗಳ ನಿರ್ಮಾಣ ಹೆಚ್ಚಾಗುತ್ತಿದ್ದು, ಇದರಿಂದ ನಗರದ ಸೌಂದರ್ಯ ಕಡಿಮೆಯಾಗುತ್ತಿದೆ. ಇದರ ಬಗ್ಗೆ ಪರ್ಯಾಯ ಚಿಂತನೆ ನಡೆಸಬೇಕಿದೆ’ ಎಂದರು.

ಶಾಸಕ ಜಿ.ಟಿ. ದೇವೇಗೌಡ ‘ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಹಲವಾರು ರಸ್ತೆಗಳ ದುರಸ್ತಿಪಡಿಸಬೇಕಿದ್ದು, ಅಧಿಕಾರಿಗಳು ಕ್ರಮ ವಹಿಸಬೇಕು’ ಎಂದರು.

ಶಾಸಕ ಕೆ. ಹರೀಶ್ ಗೌಡ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಎಸ್. ಯುಕೇಶ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್ ಉಪಸ್ಥಿತರಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.