ADVERTISEMENT

ಜ. 7ರಂದು ಮೈಸೂರು ಬಂದ್: ಬೆಂಬಲಿಸಲು ಮನವಿ

​ಪ್ರಜಾವಾಣಿ ವಾರ್ತೆ
Published 2 ಜನವರಿ 2025, 7:41 IST
Last Updated 2 ಜನವರಿ 2025, 7:41 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

– ಐಸ್ಟಾಕ್ ಚಿತ್ರ.

ಮೈಸೂರು: ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಡಾ. ಬಿ.ಆರ್. ಅಂಬೇಡ್ಕರ್ ಅಭಿಮಾನಿಗಳ ಹೋರಾಟ ಸಮಿತಿಯು ಜನವರಿ 7 ರಂದು ಮೈಸೂರು ಬಂದ್ ಕರೆ ನೀಡಿದ್ದು, ಎಲ್ಲರೂ ಸ್ವಯಂಪ್ರೇರಿತರಾಗಿ ಪಾಲ್ಗೊಳ್ಳಬೇಕು ಎಂದು ಸಮಿತಿ ಮುಖಂಡ ಪುರುಷೋತ್ತಮ್ ಕೋರಿದರು‌.

ADVERTISEMENT

'ಅಂದು ಬೆಳಿಗ್ಗೆ 6ರಿಂದ ಮಧ್ಯಾಹ್ನ 4ರವರೆಗೆ ಬಂದ್ ನಡೆಯಲಿದೆ. ವಿವಿಧ ಸಂಘಟನೆಗಳು, ಒಕ್ಕೂಟಗಳು ಈಗಾಗಲೇ ಬೆಂಬಲ ನೀಡಿವೆ. ಶಾಲೆ-ಕಾಲೇಜು, ಸಾರಿಗೆ ಸೇವೆ, ವ್ಯಾಪಾರ-ವಹಿವಾಟು ಸ್ಥಗಿತಗೊಳಿಸುವ ಮೂಲಕ ಬಂದ್ ಬೆಂಬಲಿಸಬೇಕು' ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.