ADVERTISEMENT

ಮೈಸೂರು ಬಂದ್‌ಗೆ ಉತ್ತಮ ಪ್ರತಿಕ್ರಿಯೆ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2022, 6:51 IST
Last Updated 7 ಫೆಬ್ರುವರಿ 2022, 6:51 IST
ಮೈಸೂರು ಬಂದ್‌
ಮೈಸೂರು ಬಂದ್‌   

ಮೈಸೂರು: ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ತೆಗೆದ ಪ್ರಕರಣ ಖಂಡಿಸಿ ಸಂವಿಧಾನ ರಕ್ಷಣಾ ಸಮಿತಿ ಕರೆ ನೀಡಿರುವ ಮೈಸೂರು ಬಂದ್‌ಗೆ ನಗರದ ಕೇಂದ್ರ ಭಾಗದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ‌.

ಹಲವೆಡೆ ಪ್ರತಿಭಟನಾಕಾರರು ಬಲವಂತವಾಗಿ ಅಂಗಡಿಗಳನ್ನು ಮುಚ್ಚಿಸಿದ್ದಾರೆ‌. ಬೆಳಿಗ್ಗೆ 11 ರ ನಂತರ ಬಸ್ ಸಂಚಾರ ಆರಂಭವಾಗಿದೆ. ಬಲವಂತವಾಗಿ ಖಾಸಗಿ ಶಾಲಾ ಕಾಲೇಜುಗಳನ್ನು ಮುಚ್ಚಿಸಲಾಗಿದ್ದು, ಪೋಷಕರು ತಮ್ಮ ಮಕ್ಕಳನ್ನು ಮನೆಗೆ ಕರೆತರಲು ಪರದಾಡುವಂತಹ ಸನ್ನಿವೇಶ ಸೃಷ್ಟಿಯಾಗಿದೆ. ರಾಮಸ್ವಾಮಿ ವೃತ್ತ, ಕೋಟೆ ಅಂಜನೇಯಸ್ವಾಮಿ ದೇಗುಲದ ವೃತ್ತ, ರಿಂಗ್ ರಸ್ತೆಯ ಎಲ್ಲ ಜಂಕ್ಷನ್ ಗಳಲ್ಲೂ ರಸ್ತೆ ತಡೆ ನಡೆದಿದೆ.

ರಾಮಸ್ವಾಮಿ ವೃತ್ತದಲ್ಲಿ ಮಾನಸ ಸರಪಳಿ ರಚಿಸಿದ್ದರಿಂದ ಆಂಬುಲೆನ್ಸ್ ಸಂಚಾರಕ್ಕೆ ತೊಂದರೆಯಾಗಿ, ಅಡ್ಡರಸ್ತೆಗಳಲ್ಲಿ ಸಂಚರಿಸಬೇಕಾಯಿತು. ಸಯ್ಯಾಜಿರಾವ್ ರಸ್ತೆ, ಅಶೋಕ ರಸ್ತೆ, ದೇವರಾಜ ಅರಸು ರಸ್ತೆಗಳಲ್ಲಿ ಅಂಗಡಿಗಳೆಲ್ಲವೂ ಮುಚ್ಚಿವೆ.

ADVERTISEMENT

ಬಂದ್‌ಗೆ ಬೆಂಬಲ ನೀಡಿದ ಕಾಂಗ್ರೆಸ್

ಮೈಸೂರು: ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ತೆಗೆದ ಪ್ರಕರಣ ಖಂಡಿಸಿ ಸಂವಿಧಾನ ರಕ್ಷಣಾ ಸಮಿತಿ ಕರೆ ನೀಡಿರುವ ಮೈಸೂರು ಬಂದ್ ಗೆ ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿ ಬೆಂಬಲ ನೀಡಿ, ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಂಡರು‌.

ಶಾಸಕ ಡಾ‌.ಯತೀಂದ್ರ ಸಿದ್ದರಾಮಯ್ಯ,ವಿಧಾನಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜೆ.ವಿಜಯಕುಮಾರ್, ಮುಖಂಡರಾದ ಕೆ.ಮರೀಗೌಡ, ಎಂ.ಕೆ.ಸೋಮಶೇಖರ್, ಶಿವಣ್ಣ, ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.