ಮೈಸೂರು: ಬಡ್ತಿ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಲ್ಲಿನ ಮಹಾನಗರ ಪಾಲಿಕೆ ನೌಕರರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರು ಶುಕ್ರವಾರ ಭಾಗವಹಿಸಿ, ಬೆಂಬಲ ಸೂಚಿಸಿದರು.
ಈ ವೇಳೆ ಮಾತನಾಡಿದ ಅವರು, ‘ಮೈಸೂರು ಮುಖ್ಯಮಂತ್ರಿಗಳ ತವರು. ಇಲ್ಲಿ ನ್ಯಾಯಕ್ಕಾಗಿ ನೌಕರರು ಪ್ರತಿಭಟಿಸುತ್ತಿದ್ದಾರೆ. ಅವರು ತಕ್ಷಣವೇ ನೌಕರರ ಬೇಡಿಕೆ ಈಡೇರಿಸಬೇಕು’ ಎಂದು ಒತ್ತಾಯಿಸಿದರು.
ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ‘ಹೋರಾಟದ ಧ್ವನಿಯನ್ನು ವಿಧಾನಸಭೆಗೆ ಮುಟ್ಟಿಸುವ ಕೆಲಸವನ್ನು ಪಕ್ಷ ಮಾಡುತ್ತದೆ’ ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.