ನಗರ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್‌ಗಳನ್ನು ಕರೆಯಿಸಿ, ಪ್ರಯಾಣಿಕರಿಗೆ ಅನುಕೂಲ ಮಾಡಿ ಕೊಡಲಾಗಿತ್ತು
ಪ್ರಜಾವಾಣಿ ಚಿತ್ರ/ಅನೂಪ್ ರಾಘ. ಟಿ.
ಮೈಸೂರು: ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರ ಕಾರಣ ಮಂಗಳವಾರ ನಗರ ಬಸ್ ಸಂಚಾರ ಸ್ತಬ್ಧವಾಗಿದ್ದರೆ, ಗ್ರಾಮಾಂತರ ಭಾಗದಲ್ಲಿ ಅರ್ಧದಷ್ಟು ಬಸ್‌ಗಳು ಕಾರ್ಯಾಚರಿಸಿದವು.
ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಹಮ್ಮಿಕೊಂಡಿರುವ ಮುಷ್ಕರಕ್ಕೆ ಜಿಲ್ಲೆಯ ಕೆಎಸ್‌ಆರ್‌ಟಿಸಿ ಕಾರ್ಮಿಕ ಸಂಘಟನೆಗಳು ಬೆಂಬಲ ನೀಡಿದ್ದು, ಜಿಲ್ಲೆಯಲ್ಲಿ ಬಸ್ ಸಂಚಾರ ಭಾಗಶಃ ಸ್ತಬ್ಧವಾಗಿತ್ತು.
ನಗರದಲ್ಲಿ ಜನರು ಖಾಸಗಿ ಬಸ್ ಹಾಗೂ ಆಟೊಗಳನ್ನು ಅವಲಂಬಿಸಿದ್ದರು. ನಗರ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್‌ಗಳನ್ನು ಕರೆಯಿಸಿ, ಪ್ರಯಾಣಿಕರಿಗೆ ಅನುಕೂಲ ಮಾಡಿ ಕೊಡಲಾಗಿತ್ತು.
'ಗ್ರಾಮೀಣ ಭಾಗದಲ್ಲಿ ಶೇ 45ರಷ್ಟು ಬಸ್‌ಗಳು ಕಾರ್ಯಾಚರಿಸಿವೆ. ಪಿರಿಯಾಪಟ್ಟಣ, ಎಚ್.ಡಿ.ಕೋಟೆ, ಹುಣಸೂರು, ಕೆ.ಆರ್.ನಗರದಲ್ಲಿ ಹೆಚ್ಚೇನೂ ತೊಂದರೆ ಆಗಿಲ್ಲ' ಎಂದು ಕೆಎಸ್‌ಆರ್‌ಟಿಸಿ ಗ್ರಾಮೀಣ ವಿಭಾಗದ ಡಿ.ಸಿ ಶ್ರೀನಿವಾಸ್ 'ಪ್ರಜಾವಾಣಿ'ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.