ಜಯಪುರ (ಮೈಸೂರು ಜಿಲ್ಲೆ): ತಾಲ್ಲೂಕಿನ ಗುಜ್ಜೇಗೌಡನಪುರ ಗ್ರಾಮದ ಬಳಿ ಸೋಮವಾರ ಬೆಳಿಗ್ಗೆ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿದ ಮುಸುಕುಧಾರಿಗಳ ಗುಂಪೊಂದು ಅವರಿಗೆ ಹಲ್ಲೆ ನಡೆಸಿ, ₹1.5 ಲಕ್ಷ ಕಸಿದು ಕಾರಿನೊಂದಿಗೆ ಪರಾರಿಯಾಗಿದ್ದಾರೆ.
'ಕೇರಳದ ಅಡಿಕೆ ವ್ಯಾಪಾರಿ ಶಫಿ ಮೈಸೂರು- ಮಾನಂದವಾಡಿ ರಾಜ್ಯ ಹೆದ್ದಾರಿಯಲ್ಲಿ ತೆರಳುತ್ತಿದ್ದರು. ಈ ವೇಳೆ ಎರಡು ಕಾರಿನಲ್ಲಿ ಬಂದು ಅವರನ್ನು ಅಡ್ಡಗಟ್ಟಿದ ಗುಂಪು, ಕಾರಿನ ಚಾಲಕ ಹಾಗೂ ಶಫಿ ಅವರನ್ನು ಕೆಳಗೆಳೆದು ಹಾಕಿ, ಅದೇ ಕಾರಿನಲ್ಲಿ ಪರಾರಿಯಾಗಿದ್ದಾರೆ' ಎಂದು ಪೊಲೀಸರು ತಿಳಿಸಿದ್ದಾರೆ. ಜಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳಕ್ಕೆ ಮೈಸೂರು ಜಿಲ್ಲಾ ಎಸ್ಪಿ ವಿಷ್ಣುವರ್ಧನ, ಹೆಚ್ಚುವರಿ ಎಸ್.ಪಿ ಮಲ್ಲಿಕ್, ಡಿವೈಎಸ್ಪಿ ರಘು, ಜಯಪುರ ಠಾಣಾ ಪಿಎಸ್ಐ ಪ್ರಕಾಶ್ ಯತ್ತಿನಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.