ADVERTISEMENT

ಮೈಸೂರು ಮಹಾನಗರ ಪಾಲಿಕೆ ವಾರ್ಡ್ 36 ಉಪಚುನಾವಣೆ: ಕಾಂಗ್ರೆಸ್‌ಗೆ ಗೆಲುವು

ಜೆಡಿಎಸ್‌ಗೆ ಮುಖಭಂಗ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2021, 4:16 IST
Last Updated 6 ಸೆಪ್ಟೆಂಬರ್ 2021, 4:16 IST
ಕಾಂಗ್ರೆಸ್‌ನ ರಜನಿ ಅಣ್ಣಯ್ಯ
ಕಾಂಗ್ರೆಸ್‌ನ ರಜನಿ ಅಣ್ಣಯ್ಯ   

ಮೈಸೂರು: ಮಹಾನಗರ ಪಾಲಿಕೆ 36ನೇ ವಾರ್ಡ್‌ (ಯರಗನಹಳ್ಳಿ) ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯ ಸಾಧಿಸಿದೆ. ಜೆಡಿಎಸ್ ಗೆ ತೀವ್ರ ಮುಖಭಂಗ ಆಗಿದೆ. ಬಿಜೆಪಿ ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಮತಗಳನ್ನು ಪಡೆದಿದೆ.

ಕಾಂಗ್ರೆಸ್‌ನ ರಜನಿ ಅಣ್ಣಯ್ಯ 4113 ಮತಗಳನ್ನು ಪಡೆದರೆ, ಜೆಡಿಎಸ್‌ನ ಲೀಲಾವತಿ 2116, ಬಿಜೆಪಿಯ ಶೋಭಾ ಪಿ.ರಮೇಶ್ 601 ಮತಗಳನ್ನು ಪಡೆದರು.

ಕಾಂಗ್ರೆಸ್- ಜೆಡಿಎಸ್ ನಡುವಿನ ಜಿದ್ದಾಜಿದ್ದಿನಿಂದ ಉಪಚುನಾವಣೆ ಫಲಿತಾಂಶ ಸಾಕಷ್ಟು ಕುತೂಹಲ ಕೆರಳಿಸಿತ್ತು.

ADVERTISEMENT

ಈ ಸ್ಥಾನವನ್ನು ಜೆಡಿಎಸ್ ನಿಂದ ಕಸಿದುಕೊಳ್ಳುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ.

ಜೆಡಿಎಸ್‌ನ ರುಕ್ಮಿಣಿ ಮಾದೇಗೌಡ ಅವರ ಸದಸ್ಯತ್ವ ರದ್ದಾಗಿದ್ದರಿಂದ ಉಪಚುನಾವಣೆ ನಡೆದಿತ್ತು.

2018ರ ಚುನಾವಣೆಯಲ್ಲಿ ರಜನಿ ಅಣ್ಣಯ್ಯ ಅವರು ರುಕ್ಮಿಣಿ ಎದುರು 364 ಮತಗಳಿಂದ ಸೋಲು ಅನುಭವಿಸಿದ್ದರು. ಉಪಚುನಾವಣೆಯಲ್ಲಿ ಭಾರಿ ಅಂತರದ ಗೆಲುವು ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.