ADVERTISEMENT

ಮಹಿಷ ಆರಾಧನೆಯನ್ನೂ ಗೌರವಿಸೋಣ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ರೈತ ದಸರಾ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2019, 13:12 IST
Last Updated 1 ಅಕ್ಟೋಬರ್ 2019, 13:12 IST
ಜೆ.ಕೆ.ಮೈದಾನದಲ್ಲಿ ಮಂಗಳವಾರ ನಡೆದ ರೈತ ದಸರಾ ಕಾರ್ಯಕ್ರಮದಲ್ಲಿ ಸಾಧಕ ರೈತರನ್ನು ಶಾಸಕ ಎಲ್‌.ನಾಗೇಂದ್ರ ಸನ್ಮಾನಿಸಿದರು. ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್‌ ಇದ್ದಾರೆ
ಜೆ.ಕೆ.ಮೈದಾನದಲ್ಲಿ ಮಂಗಳವಾರ ನಡೆದ ರೈತ ದಸರಾ ಕಾರ್ಯಕ್ರಮದಲ್ಲಿ ಸಾಧಕ ರೈತರನ್ನು ಶಾಸಕ ಎಲ್‌.ನಾಗೇಂದ್ರ ಸನ್ಮಾನಿಸಿದರು. ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್‌ ಇದ್ದಾರೆ   

ಮೈಸೂರು: ‘ಭಾರತದಲ್ಲಿ ಕೋಟ್ಯಂತರ ಜನ ತಾಯಿ ಚಾಮುಂಡಿಯನ್ನು ಬೆಂಬಲಿಸುತ್ತಾರೆ, ಆದರೆ ಅಲ್ಲೊ ಇಲ್ಲೊ ಮಹಿಷನನ್ನು ಸರಿ ಎಂಬುವವರೂ ಇರುತ್ತಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರನ್ನೂ ಗೌರವಿಸಬೇಕು’ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಇಲ್ಲಿನ ಜೆ.ಕೆ. ಮೈದಾನದ ವೈದ್ಯಕೀಯ ಮಹಾವಿದ್ಯಾಲಯದ ಅಮೃತ ಮಹೋತ್ಸವ ಸಭಾಂಗಣದಲ್ಲಿ ಮಂಗಳವಾರ ರೈತ ದಸರಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಚಾಮುಂಡೇಶ್ವರಿ ಸಮಾಜದ ಒಳಿತಿಗಾಗಿ ಅಸುರನನ್ನು ಸಂಹಾರ ಮಾಡಿದಳು. ಇಂಥ ದೇವಿಯನ್ನು ಎಲ್ಲರೂ ಆರಾಧಿಸುವ ಸಂದರ್ಭ’ ಎಂದು ಹೇಳಿದರು.

ADVERTISEMENT

‘ಕರ್ನಾಟಕದಲ್ಲಿ ಅನೇಕ ವರ್ಷಗಳಿಂದ ತೀವ್ರ ಬರಗಾಲವಿತ್ತು, ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹೆಚ್ಚು ಮಳೆಯಾಗಿ ಜಲಾಶಯಗಳೆಲ್ಲ ತುಂಬಿದವು. ರೈತರ ಮುಖದಲ್ಲಿ ಸಂತೋಷ ಕಂಡಿದ್ದೇವೆ. ಪ್ರವಾಹ ಬಂದು ಅನೇಕ ಸಮಸ್ಯೆಯಾಗಿದೆ. ಆದರೆ ಅವರ ಕಷ್ಟಗಳಿಗೆ ಸ್ಪಂದಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಿದೆ’ ಎಂದು ಸಮರ್ಥನೆ ನೀಡಿದರು.

‘ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆದೇಶದಂತೆ ಒಬೊಬ್ಬ ಸಚಿವರೂ ಪ್ರವಾಹಪೀಡಿತ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಪರಿಸ್ಥಿತಿಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿದ್ದಾರೆ’ ಎಂದು ಹೇಳಿದರು.

‘ಸುಮಾರು 3 ಲಕ್ಷ ಜನ ಒಳನಾಡು ಮೀನುಗಾರಿಕೆಯನ್ನು ನೆಚ್ಚಿಕೊಂಡಿದ್ದಾರೆ, ಅವರ ಬದುಕಿಗೆ ಉತ್ತೇಜನ ನೀಡಲು ಹೊಸ ಯೋಜನೆಗಳನ್ನು ಜಾರಿಗೆ ತರಲು ಕಾರ್ಯಕ್ರಮ ರೂಪಿಸುತ್ತೇವೆ’ ಎಂದರು.

ಕೃಷಿಯಲ್ಲಿ ಸಾಧನೆ ಮಾಡಿದ ಜಿಲ್ಲೆಯ ರೈತರನ್ನು ಸನ್ಮಾನಿಸಲಾಯಿತು.

ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌, ಸಂಸದ ಪ್ರತಾಪ ಸಿಂಹ, ಶಾಸಕ ಎಲ್‌.ನಾಗೇಂದ್ರ, ಜಿ.ಪಂ. ಅಧ್ಯಕ್ಷೆ ಪರಿಮಳಾ ಶ್ಯಾಮ್‌ ಸೇರಿದಂತೆ ಇತರರು ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.