ಮೈಸೂರು: ಅಭಿಮನ್ಯು ಆನೆ ಹೊತ್ತಿರುವ750 ಕೆ.ಜಿ ತೂಕದ ಚಿನ್ನದ ಅಂಬಾರಿಯಲ್ಲಿ ವಿರಾಜಮಾನವಾಗಿದ್ದ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಧ್ಯಾಹ್ನ 3.54ಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.
ಗೌರವ ವಂದನೆ ಸಲ್ಲಿಸುತ್ತಿದ್ದಂತೆ 21 ಸುತ್ತು ಕುಶಾಲತೋಪು ಸಿಡಿಸಲಾಯಿತು. ಆನೆಗಳು ಸೊಂಡಿಲೆತ್ತಿ ನಮಸ್ಕರಿಸಿದರೆ, ಆವರಣದಲ್ಲಿ ಸೇರಿದ್ದ ಬೆರಳೆಣಿಕೆ ಮಂದಿ ತಲೆಬಾಗಿ ನಮಿಸಿ ನಾಡದೇವತೆಗೆ ನಮಿಸಿದರು.
ಮೊದಲ ಬಾರಿ ಅಂಬಾರಿ ಹೊತ್ತಿದ್ದ ಅಭಿಮನ್ಯು ಜೊತೆ ಕಾವೇರಿ, ವಿಜಯಾ, ವಿಕ್ರಂ ಹಾಗೂ ಗೋಪಿ ರಾಜಗಾಂಭೀರ್ಯದಿಂದ ಜಂಬೂಸವಾರಿಯಲ್ಲಿ ಹೆಜ್ಜೆ ಇಟ್ಟವು. ಕೇವಲ ಐದು ಕಲಾ ತಂಡಗಳು, ಎರಡು ಸ್ತಬ್ಧಚಿತ್ರಗಳು, ಹಿಂದೆ ಪೊಲೀಸ್ ಬ್ಯಾಂಡ್ ಹಾಗೂ ಅಶ್ವಾರೋಹಿ ಪಡೆ ಸಾಗಿದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.