ADVERTISEMENT

ಮೈಸೂರು: ದಸರೆಗೆ ಮುನ್ನುಡಿ ಬರೆದ ಗಜ‍ಪಯಣ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2023, 6:58 IST
Last Updated 1 ಸೆಪ್ಟೆಂಬರ್ 2023, 6:58 IST
<div class="paragraphs"><p>ಮೈಸೂರಿನ ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ವ್ಯಾಪ್ತಿಯ ವೀರನಹೊಸಹಳ್ಳಿಯಲ್ಲಿ ಶುಕ್ರವಾರ ನಾಡಹಬ್ಬ ದಸರೆಯಲ್ಲಿ ಪಾಲ್ಗೊಳ್ಳುವ ಕ್ಯಾಪ್ಟನ್ ಅಭಿಮನ್ಯು‌ ನೇತೃತ್ವದ 9 ಆನೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಅರಣ್ಯ ಸಚಿವ ಈಶ್ವರ ಖಂಡ್ರೆ ಪೂಜೆ ಸಲ್ಲಿಸಿದರು. </p></div>

ಮೈಸೂರಿನ ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ವ್ಯಾಪ್ತಿಯ ವೀರನಹೊಸಹಳ್ಳಿಯಲ್ಲಿ ಶುಕ್ರವಾರ ನಾಡಹಬ್ಬ ದಸರೆಯಲ್ಲಿ ಪಾಲ್ಗೊಳ್ಳುವ ಕ್ಯಾಪ್ಟನ್ ಅಭಿಮನ್ಯು‌ ನೇತೃತ್ವದ 9 ಆನೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಅರಣ್ಯ ಸಚಿವ ಈಶ್ವರ ಖಂಡ್ರೆ ಪೂಜೆ ಸಲ್ಲಿಸಿದರು.

   

ಪ್ರಜಾವಾಣಿ ಚಿತ್ರ/ ಅನೂಪ್ ರಾಘ.ಟಿ

ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ ಶುಕ್ರವಾರ ದಸರೆಯ ಸಂಭ್ರಮಕ್ಕೆ ‘ಗಜ ಪಯಣ’ವು ಮುನ್ನುಡಿ ಬರೆಯಿತು.

ADVERTISEMENT

ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುತ್ತಿರುವ ಅಭಿಮನ್ಯು ಸೇರಿ 9 ಆನೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ, ಅರಣ್ಯ ಸಚಿವ ಈಶ್ವರ ಖಂಡ್ರೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿದರು. ಪುಷ್ಪಾರ್ಚನೆ ಮಾಡಿ ಗಜ ಪಯಣಕ್ಕೆ ಚಾಲನೆ ನೀಡಿದರು.

ಮತ್ತಿಗೋಡು ಆನೆ ಶಿಬಿರದ ಅಭಿಮನ್ಯು, ಭೀಮ, ಮಹೇಂದ್ರ, ಬಳ್ಳೇ ಶಿಬಿರದ ‘ಅರ್ಜುನ’, ಕೊಡಗು ಜಿಲ್ಲೆಯ ದುಬಾರೆ ಶಿಬಿರದ ‘ಧನಂಜಯ’, ‘ಗೋಪಿ’, ‘ವಿಜಯಾ’, ‘ಕಂಜನ್’, ಭೀಮನಕಟ್ಟೆ ಆನೆ ಶಿಬಿರದ ‘ವರಲಕ್ಷ್ಮಿ’ ಆನೆಗಳನ್ನು ಬಣ್ಣ ಮತ್ತು ಹೂಗಳಿಂದ ಅಲಂಕರಿಸಲಾಗಿತ್ತು. ಈ ಮೊದಲ ತಂಡದಲ್ಲಿ 7 ಗಂಡು ಹಾಗೂ 2 ಹೆಣ್ಣಾನೆಗಳಿದ್ದವು.

ಅರಮನೆ ಪುರೋಹಿತ ಪ್ರಹ್ಲಾದ್‌ ರಾವ್ ನೇತೃತ್ವದಲ್ಲಿ ಪೂಜಾ ಕಾರ್ಯ ಕ್ರಮ ನಡೆಯಿತು. ಆನೆಗಳಿಗೆ ಪಂಚಫಲ, ಕಡುಬು, ಚಕ್ಕುಲಿ, ನಿಪ್ಪಟ್ಟು, ಹೋಳಿಗೆ, ಬೆಲ್ಲ, ಕಬ್ಬು, ಕಲ್ಲು ಸಕ್ಕರೆ, ಮೋದಕ ನೈವೇದ್ಯ ನೀಡಿ ‘ಶೋಡಷೋಪಚಾರ’ ಪೂಜೆ ಮಾಡಲಾಯಿತು. ಗಣಪತಿ ಅರ್ಚನೆ ಜೊತೆ ವನದೇವತೆ, ಚಾಮುಂಡೇಶ್ವರಿಗೆ ಪ್ರಾರ್ಥನೆ ಸಲ್ಲಿಸಲಾಯಿತು.

ಪೂಜೆ ನಂತರ ಕೆಲವು ದೂರದವರೆಗೆ ಆನೆಗಳನ್ನು ನಡೆಸಿಕೊಂಡು ಬರಲಾಯಿತು. ಕಂಸಾಳೆ, ಕೋಲಾಟ, ಪೂಜಾಕುಣಿತ, ಚಂಡೆ ಮೇಳ, ಗಾರುಡಿ ಗೊಂಬೆ, ಡೊಳ್ಳು ಕುಣಿತ ಕಲಾವಿದರು ಆನೆಗಳೊಂದಿಗೆ ಹೆಜ್ಜೆ ಹಾಕಿದರು.

ಶಾಸಕ ಜಿ.ಡಿ.ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಡಿಸಿಪಿ ಜಾಹ್ನವಿ, ಎಎಸ್ ಪಿ ನಂದಿನಿ, ಅರಣ್ಯ ಸಂರಕ್ಷಣಾಧಿಕಾರಿ ಮಾಲತಿ ಪ್ರಿಯಾ, ಡಿಸಿಎಫ್ ಗಳಾದ ಸೌರಭ್ ಕುಮಾರ್, ಬಸವರಾಜು ಇದ್ದರು.

ಓದಿ... ನಾಡಹಬ್ಬ ದಸರೆಗೆ ₹30 ಕೋಟಿ ಅನುದಾನ: ಸಚಿವ ಮಹದೇವಪ್ಪ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.