ಮೈಸೂರು: ಈ ಬಾರಿ ಸೆ.22ರಿಂದ ಅ.2ರವರೆಗೆ ನಡೆಯಲಿರುವ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸಿದ್ಧತೆಗಳನ್ನು ಮಾಡಿಕೊಳ್ಳಲು ಸಾಕಷ್ಟು ಮುಂಚೆಯೇ ಉಪ ಸಮಿತಿಗಳನ್ನು ರಚಿಸಲಾಗಿದೆ.
ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಉಪ ವಿಶೇಷಾಧಿಕಾರಿ, ಕಾರ್ಯಾಧ್ಯಕ್ಷರು ಹಾಗೂ ಕಾರ್ಯದರ್ಶಿ ನೇಮಿಸಲಾಗಿದೆ. ಸದ್ಯ 19 ಉಪ ಸಮಿತಿಗಳನ್ನು ರಚಿಸಲಾಗಿದೆ. ಕೆಲವು ಸಮಿತಿಗಳಿಗೆ ಸಹ ಕಾರ್ಯಾಧ್ಯಕ್ಷರು, ಸಮನ್ವಯಾಧಿಕಾರಿಯನ್ನೂ ನೇಮಿಸಿ ದಸರಾ ವಿಶೇಷಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.