ಮೈಸೂರು: ‘ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ಬಗ್ಗೆ ವಿರೋಧ ವ್ಯಕ್ತಪಡಿಸಿ ಯಾರಿಂದಲೂ ದೂರು ಬಂದಿಲ್ಲ’ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದರು.
ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಉದ್ಘಾಟಕರು, ರಾಜ್ಯಪಾಲರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಗಣ್ಯರನ್ನು ಸೆಪ್ಟೆಂಬರ್ ಮೊದಲ ಅಥವಾ 2ನೇ ವಾರದಲ್ಲಿ ಜಿಲ್ಲಾಡಳಿತದಿಂದ ಅಧಿಕೃತವಾಗಿ ಆಹ್ವಾನಿಸಲಾಗುವುದು’ ಎಂದು ಹೇಳಿದರು.
‘ಈ ಬಾರಿ ನಾಡಹಬ್ಬದ ತಯಾರಿಗಳನ್ನು ಎರಡು ತಿಂಗಳು ಮುಂಚಿತವಾಗಿಯೇ ಆರಂಭಿಸಲಾಗಿದೆ. ಸೆ.22ರಿಂದ ಅ.2ರವರೆಗೆ ನಡೆಯಲಿರುವ ವೈವಿಧ್ಯಮಯ ಕಾರ್ಯಕ್ರಮಗಳ ಕುರಿತು ಚರ್ಚಿಸಲು 19 ಉಪ ಸಮಿತಿಗಳನ್ನು ರಚಿಸಲಾಗಿದೆ. ಅರಮನೆ ಆವರಣದಲ್ಲಿ ಸೇರಿದಂತೆ ವಿವಿಧ ವೇದಿಕೆಗಳಲ್ಲಿ ಕಾರ್ಯಕ್ರಮ ನೀಡುವ ಕಲಾವಿದರು–ಕಲಾತಂಡಗಳು, ಯುವ ದಸರಾ, ಯುವ ಸಂಭ್ರಮದಲ್ಲಿ ಪಾಲ್ಗೊಳ್ಳುವವರ ಪಟ್ಟಿಯನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ಅಂತಿಮಗೊಳಿಸಿ ಪ್ರಕಟಿಸಲಾಗುವುದು. ಆನ್‌ಲೈನ್‌ನಲ್ಲಿ ಟಿಕೆಟ್ ಮಾರಾಟವನ್ನು ಶೀಘ್ರದಲ್ಲೇ ಆರಂಭಿಸಲಾಗುವುದು’ ಎಂದು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.