ಮೈಸೂರು ದಸರಾ
-ಪ್ರಜಾವಾಣಿ ಚಿತ್ರ/ಅನೂಪ್ ರಾಘ.ಟಿ.
ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಹಾಗೂ ಪಂಜಿನ ಕವಾಯತು ಕಾರ್ಯಕ್ರಮಗಳ ವೀಕ್ಷಣೆಗೆ ಟಿಕೆಟ್ ಹಾಗೂ ‘ಗೋಲ್ಡ್ ಕಾರ್ಡ್’ಗಳ ಮಾರಾಟಕ್ಕೆ ಜಿಲ್ಲಾಡಳಿತ ಚಾಲನೆ ನೀಡಿದೆ.
https://mysoredasara.gov.in/ ಆಧಿಕೃತ ಜಾಲತಾಣದಲ್ಲಿ ಶನಿವಾರ ಮಧ್ಯಾಹ್ನ 3ರಿಂದಲೇ ಆನ್‌ಲೈನ್‌ನಲ್ಲಿ ಖರೀದಿಗೆ ಲಭ್ಯ ಇವೆ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಬಾರಿಯ ದಸರಾ ಸೆ.22ರಿಂದ ಅ.2ರವರೆಗೆ ನಡೆಯಲಿದೆ.
ಗೋಲ್ಡ್ ಕಾರ್ಡ್ ಖರೀದಿಸಿದವರಿಗೆ (ಒಂದಕ್ಕೆ ₹ 6,500) ಚಾಮರಾಜೇಂದ್ರ ಮೃಗಾಲಯ, ಚಾಮುಂಡಿಬೆಟ್ಟ (ವಿಶೇಷ ದರ್ಶನಕ್ಕೆ), ಮೈಸೂರು ಅರಮನೆಗೆ ಒಂದು ಬಾರಿ ಉಚಿತವಾಗಿ ಪ್ರವೇಶ ದೊರೆಯಲಿದೆ. ಡ್ರೋನ್ ಶೋ, ಜಂಬೂಸವಾರಿ ಹಾಗೂ ಪಂಜಿನ ಕವಾಯತು ವೀಕ್ಷಣೆಗೆ ಪ್ರತ್ಯೇಕವಾಗಿ ಆಸನಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.