ಮೈಸೂರು: ಅರಮನೆ ಅಂಗಳದ ಆನೆ ಬಿಡಾರದಲ್ಲಿ ಮಣಿಪಾಲ್ ಆಸ್ಪತ್ರೆಯಿಂದ ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆಗಳ ಮಾವುತ, ಕಾವಾಡಿ ಮತ್ತು ಕುಟುಂಬದ ಸದಸ್ಯರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಉಚಿತ ತಪಾಸಣೆ ನಡೆಸಲಾಯಿತು.
ಆಸ್ಪತ್ರೆ ನಿರ್ದೇಶಕ ಪ್ರಮೋದ್ ಕುಂದರ್ ಮಾತನಾಡಿ, ‘ಆನೆಗಳ ಯೋಗಕ್ಷೇಮ ನೋಡಿಕೊಳ್ಳುವವರ ಆರೋಗ್ಯ ಮುಖ್ಯ. ಕಾಡಿನಲ್ಲಿರುವವರು ನಗರಕ್ಕೆ ಬಂದಾಗ ಇಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ಕಷ್ಟವಾಗುತ್ತದೆ. ಅವರ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇದನ್ನು ಮನಗಂಡು ಶಿಬಿರದ ಮೂಲಕ ತಪಾಸಣೆ ನಡೆಸಲಾಗಿದೆ’ ಎಂದರು.
ಡಿಸಿಎಫ್ ಪ್ರಭುಗೌಡ ಮಾತನಾಡಿ, ‘ಆನೆಗಳಿಗೆ ನೀಡುವ ಆರೈಕೆಯಷ್ಟೇ ಮಾವುತರು ಮತ್ತು ಅವರ ಕುಟುಂಬಗಳ ಆರೋಗ್ಯವೂ ಮುಖ್ಯ. ಅವರು ತಮ್ಮ ಆರೋಗ್ಯಕ್ಕಿಂತ ಹೆಚ್ಚಾಗಿ ಆನೆಗಳ ಯೋಗಕ್ಷೇಮದ ಬಗ್ಗೆ ಹೆಚ್ಚಾಗಿ ಯೋಚಿಸುತ್ತಾರೆ. ಇದರಿಂದ ಅವರ ಆರೋಗ್ಯ ಹದಗೆಡುತ್ತದೆ. ಈ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಯಿಂದ ಶಿಬಿರ ಆಯೋಜಿಸಲಾಗಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.