ADVERTISEMENT

ದಸರಾ ಉದ್ಘಾಟನೆಗೆ ರಾಷ್ಟ್ರಪತಿ ಬರುತ್ತಿರುವುದು ಹೆಮ್ಮೆಯ ಸಂಗತಿ: ಯದುವೀರ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2022, 12:15 IST
Last Updated 21 ಸೆಪ್ಟೆಂಬರ್ 2022, 12:15 IST
   

ಮೈಸೂರು: ‘ನಾಡಹಬ್ಬ ಮೈಸೂರು ದಸರೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟನೆ ಮಾಡುತ್ತಿರುವುದು ಹೆಮ್ಮೆಯ ವಿಷಯ’ ಎಂದು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

ಇಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದ ಅವರು, ‘ಎರಡು ವರ್ಷದ ಬಳಿಕ ಅದ್ಧೂರಿಯಾಗಿ ದಸರಾ ಆಚರಣೆ ಮಾಡಲಾಗುತ್ತಿದೆ. ಅರಮನೆಯಲ್ಲಿ ಪ್ರತಿ ವರ್ಷದಂತೆ ಸಾಂಪ್ರದಾಯಿಕವಾಗಿ ಆಚರಣೆ ಇರಲಿದೆ. ಮೈಸೂರಿಗೆ ಬರಲಿರುವ ರಾಷ್ಟ್ರಪತಿ ಅವರನ್ನು ಅರಮನೆಗೆ ಆಹ್ವಾನಿಸುವ ಬಗ್ಗೆ ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ತೀರ್ಮಾನ ಮಾಡುತ್ತಾರೆ’ ಎಂದರು.

‘ಜಂಬೂಸವಾರಿಯು ಎರಡು ವರ್ಷಗಳ ಬಳಿಕ ಅರಮನೆಯಿಂದ ಹೊರಗಡೆ ಅಂದರೆ ಬನ್ನಿಮಂಟಪದವರೆಗೆ ನಡೆಯುತ್ತಿದೆ. ಸಾರ್ವಜನಿಕರು, ಪ್ರವಾಸಿಗರು ಇದನ್ನು ಕಣ್ತುಂಬಿಕೊಂಡು ಆನಂದಿಸಬೇಕು’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.