
ಪರೀಕ್ಷೆ
ಮೈಸೂರು: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಲ್ಲಿ ಪರೀಕ್ಷೆಯ ಆತಂಕವನ್ನು ದೂರಾಗಿಸಿ, ಮನೋಸ್ಥೈರ್ಯ ಮತ್ತು ಮಾನಸಿಕ ಪ್ರಶಾಂತತೆ ಹೆಚ್ಚಿಸುವ ನಿಟ್ಟಿನಲ್ಲಿ ಜ.18ರಂದು ‘ಪರೀಕ್ಷೆ-ನಿಶ್ಚಿಂತೆಯ ಹಾದಿ’ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ.
ನಗರದ ಲಕ್ಷ್ಮಿಪುರಂನಲ್ಲಿರುವ ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1.30ರವರೆಗೆ ಕಾರ್ಯಕ್ರಮ ನಡೆಯಲಿದೆ. ತರಬೇತುದಾರರು ಮಾರ್ಗದರ್ಶನ ನೀಡುವರು.
ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್ ರಾಜು ಹಾಗೂ ತಾಂತ್ರಿಕ ನಿರ್ದೇಶಕ ಡಿ.ಜೆ. ದಿವಾಕರ್ ಕಾರ್ಯಕ್ರಮದ ಪೋಸ್ಟರ್‌ಗಳನ್ನು ಶನಿವಾರ ಬಿಡುಗಡೆ ಮಾಡಿದರು.
ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಮೈಸೂರು ಜಿಲ್ಲಾ ಸಮಿತಿ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ, ಕರ್ನಾಟಕ ವಿದ್ಯುತ್ ಮಂಡಳಿ ಇಂಜಿನಿಯರುಗಳ ಸಂಘ, ಕರ್ನಾಟಕ ವಿದ್ಯುತ್ ಮಂಡಳಿ ಲೆಕ್ಕಾಧಿಕಾರಿಗಳ ಸಂಘ, ಕರ್ನಾಟಕ ವಿದ್ಯುತ್ ಮಂಡಳಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಮಿತಿ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಡಿಪ್ಲೊಮಾ ಎಂಜಿನಿಯರ್‌ಗಳ ಸಂಘ ಹಾಗೂ ಎಸ್ಕಾಂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಧಿಕಾರಿಗಳ ಸಂಘಗಳ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.