ಮೈಸೂರು: ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾದ ಆರೋಪಿಗಳ ಪೈಕಿ ಮೂವರನ್ನು ತಮಿಳುನಾಡಿಗೆ ಕರೆದುಕೊಂಡು ಹೋದ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಘಟನೆ ನಡೆದ ದಿನ ಆರೋಪಿಗಳು ಧರಿಸಿದ್ದ ಬಟ್ಟೆ, ಬೆದರಿಸಲು ಬಳಸಿದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ತಮ್ಮ ಮಕ್ಕಳನ್ನು ಎನ್‌ಕೌಂಟರ್ ಮಾಡಬಾರದು ಎಂದು ಬಂಧಿತರ ಪೋಷಕರು ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಂಡೆಯೊಂದರ ಮೇಲೆ ಕುಳಿತಿದ್ದ ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತರನ್ನು ದರೋಡೆ ಮಾಡುವುದಕ್ಕೆ ಹೇಳಿದ ಮತ್ತೊಬ್ಬ ಆರೋಪಿಗಾಗಿ ಪೊಲೀಸರ ತಂಡವು ತಮಿಳುನಾಡಿನಲ್ಲಿ ಶೋಧ ಕಾರ್ಯ ನಡೆಸುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.