ಮೈಸೂರು: ‘ಕನ್ನಡ ಚಳವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಹೋಟೆಲ್‌ನವರಿಗೆ ದುರಹಂಕಾರ ಎಂಬ ಹೇಳಿಕೆ ನೀಡಿರುವುದು ಖಂಡನೀಯ. ಅವರು ಕೂಡಲೇ ಕ್ಷಮೆ ಯಾಚಿಸಬೇಕು’ ಎಂದು ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ ಒತ್ತಾಯಿಸಿದ್ದಾರೆ.
ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಅವರು ಬಳಸಿರುವ ಪದ ಅವರ ಕೀಳುಮಟ್ಟದ ವ್ಯಕ್ತಿತ್ವವನ್ನು ತೋರಿಸುತ್ತದೆ. ಅವರ ಹೇಳಿಕೆಯಿಂದ ಹೋಟೆಲ್ ಮಾಲೀಕರಿಗೆ ತುಂಬಾ ನೋವಾಗಿದೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.