ADVERTISEMENT

ಮೈಸೂರು| ಕೇರಳಕ್ಕೆ ಸಾಗಿಸಲು ಯತ್ನಿಸುತ್ತಿದ್ದ ₹ 18 ಲಕ್ಷ ಮೌಲ್ಯದ ಯೂರಿಯಾ ವಶ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2026, 5:49 IST
Last Updated 17 ಫೆಬ್ರುವರಿ 2026, 5:49 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಹುಣಸೂರು (ಮೈಸೂರು ಜಿಲ್ಲೆ): ನಗರದ ಹೊರ ವಲಯದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ₹ 18 ಲಕ್ಷ ಮೌಲ್ಯದ 1,300 ಮೂಟೆ ಯೂರಿಯಾವನ್ನು ಕೃಷಿ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಸರ್ಕಾರದಿಂದ ದೊರೆಯುವ ಯೂರಿಯಾದ ಚೀಲ ಬದಲಾಯಿಸಿ ಕೇರಳ ರಾಜ್ಯಕ್ಕೆ ಸಾಗಿಸಲು ಪ್ರಯತ್ನ ನಡೆದಿತ್ತು. ಪೊಲೀಸರು ನೀಡಿದ ಮಾಹಿತಿ ಆಧರಿಸಿ ಕೃಷಿ ಇಲಾಖೆ ಅಧಿಕಾರಿಗಳು ಸೋಮವಾರ ರಾತ್ರಿ ದಾಳಿ ನಡೆಸಿ ಮೂರು ಲಾರಿ ಜಪ್ತಿ ಮಾಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.