ಪ್ರಾತಿನಿಧಿಕ ಚಿತ್ರ
ಮೈಸೂರು: ನಗರದ ಕುಂಬಾರಕೊಪ್ಪಲು ಮಹದೇಶ್ವರ ಬಡಾವಣೆಯಲ್ಲಿ ಶನಿವಾರ ಆಸ್ತಿ ಮಾರಾಟಕ್ಕೆ ಒಪ್ಪದ ಪತ್ನಿಯನ್ನು ಕೊಂದ ಆರೋಪಿ ಬಳಿಕ ಪೊಲೀಸರಿಗೆ ಶರಣಾಗಿದ್ದಾರೆ.
ಗಾಯತ್ರಿ (54) ಮೃತರು. ಅವರ ಪತಿ ಪಾಪಣ್ಣ (64) ರನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮದಲ್ಲಿದ್ದ ಪಾಪಣ್ಣ ಈಚೆಗೆ ವ್ಯವಹಾರದಲ್ಲಿ ನಷ್ಟ ಅನುಭವಿಸಿದ್ದರು. ಇದರಿಂದಾದ ಸಾಲ ತೀರಿಸಲು ಊರಿನಲ್ಲಿನ ಆಸ್ತಿ ಮಾರಲು ಮುಂದಾಗಿದ್ದರು. ಆದರೆ ಇದಕ್ಕೆ ಅವರ ಪತ್ನಿ ಒಪ್ಪಿರಲಿಲ್ಲ.
ಶನಿವಾರ ಇದೇ ವಿಚಾರಕ್ಕೆ ಇಬ್ಬರ ನಡುವೆ ಜಗಳವಾಗಿದ್ದು, ಗಾಯತ್ರಿ ದೋಸೆ ತವಾದಿಂದ ಪತಿ ಹಲ್ಲೆ ನಡೆಸಿದ್ದಾರೆ. ಕೆರಳಿದ ಪಾಪಣ್ಣ, ಮಚ್ಚಿನಿಂದ ಆಕೆ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ. ಬಳಿಕ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.
ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಭೇಟಿ ನೀಡಿದ್ದರು. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.